ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಕ್ಕಲಕೋಟೆ: ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಜಿ.ಪಂ. ಸಿ.ಇ.ಒ ತಾಕೀತು

ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿ.ಪಂ. ಸಿ.ಇ.ಒ
Published 31 ಮೇ 2024, 13:44 IST
Last Updated 31 ಮೇ 2024, 13:44 IST
ಅಕ್ಷರ ಗಾತ್ರ

ತೆಕ್ಕಲಕೋಟೆ: ಸಿರುಗುಪ್ಪ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಮತ್ತು ಕ್ರಿಯಾಯೋಜನೆ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್ ಸಂಕನೂರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಮೀಪದ ಕರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕರೂರಿನ ಸರ್ಕಾರಿ ಪೌಢಶಾಲೆಯ ಆವರಣದಲ್ಲಿ ನರೇಗಾ ಯೋಜನೆಯಡಿ ₹ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಟದ ಮೈದಾನ , ಶೌಚಾಲಯದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಉತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಟಸೂಗೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಕೃಷಿ ಹೊಂಡ ನಿರ್ಮಾಣ ಕಾರ್ಯದ ಸ್ಥಳಕ್ಕೆ ಭೇಟಿ ನೀಡಿದ ಸಿ.ಇ.ಒ. ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಕೆಮಾಡಿಕೊಂಡು ಜಾಬ್ ಕಾರ್ಡ್ ಹೊಂದಿದ ಕೂಲಿಕಾರರಿಗೆ ಕೂಲಿ ಕೆಲಸ ನೀಡಬೇಕು, ನರೇಗಾ ಯೋಜನೆಯಲ್ಲಿ ಬದು ನಿರ್ಮಾಣ, ಕೆರೆ ಅಭಿವೃದ್ಧಿ, ಹಳ್ಳ ಅಭಿವೃದ್ಧಿಯಂತಹ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದ್ದು, ಕೂಲಿಕಾರರಿಗೆ ಸಕಾಲಕ್ಕೆ ಕೂಲಿ ಹಣ ವಿತರಿಸಬೇಕೆಂದು ತಾ.ಪಂ.ಇ.ಒ. ಪವನ್‌ಕುಮಾರ್ ಅವರಿಗೆ ಸೂಚಿಸಿದರು.

ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳುವ ಕಾಮಗಾರಿಗಳಿಗೆ ಯಂತ್ರ ಬಳಕೆ ಮಾಡದೇ ಜನರಿಂದಲೇ ಕಾಮಗಾರಿ ಪೂರ್ಣಗೊಳಿಸಬೇಕು, ನರೇಗಾ ಕಾಮಗಾರಿಗಳನ್ನು ನಿಯಮಾನುಸಾರ ಜನರಿಗೆ ಅವಕಾಶ ನೀಡದ ಪ್ರಕರಣಗಳು ಕಂಡು ಬಂದರೆ ಸಂಬಂದಿಸಿದ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಹೇಳಿದರು.

ಹಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಯ ಸ್ಥಳಕ್ಕೆ ಹಾಗೂ ಗೊಬ್ಬರ ಗ್ಯಾಸ್ ನಿರ್ಮಾಣ ಸ್ಥಳಕ್ಕೆ ಭೇಟಿನೀಡಿ ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಗಿಸಬೇಕು ಎಂದು ಅದಿಕಾರಿಗಳಿಗೆ ತಾಕೀತು ಮಾಡಿದರು.
ಸಿರುಗುಪ್ಪ ತಾ.ಪಂ.ಇ.ಒ. ಪವನ್‌ಕುಮಾರ್, ನರೇಗಾ ಯೋಜನೆಯ ತಾಲ್ಲೂಕು ನಿರ್ದೇಶಕ ಮನೋಹರ, ಗ್ರಾ.ಪಂ.ಪಿ.ಡಿ.ಒ. ರಾಜೇಶ್ವರಿ ಮತ್ತು ನರೇಗಾ ಯೋಜನೆಯ ಸಿಬ್ಬಂದಿ ಇದ್ದರು.

ತೆಕ್ಕಲಕೋಟೆ ಸಮೀಪದ ಕರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯ ವಿವಿಧ ಕಾಮಗಾರಿಗಳನ್ನು ಜಿಲ್ಲಾಪಂಚಾಯಿತಿ ಸಿಇಒ ಪರಿಶೀಲನೆ ನಡೆಸಿದರು
ತೆಕ್ಕಲಕೋಟೆ ಸಮೀಪದ ಕರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯ ವಿವಿಧ ಕಾಮಗಾರಿಗಳನ್ನು ಜಿಲ್ಲಾಪಂಚಾಯಿತಿ ಸಿಇಒ ಪರಿಶೀಲನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT