ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇವಸ್ಥಾನ ಪ್ರವೇಶ: ಎರಡು ಗುಂಪುಗಳ ಮಧ್ಯೆ ಘರ್ಷಣೆ

Published 25 ಮೇ 2024, 15:37 IST
Last Updated 25 ಮೇ 2024, 15:37 IST
ಅಕ್ಷರ ಗಾತ್ರ

ಕಂಪ್ಲಿ: ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಘರ್ಷಣೆ, ವಾಗ್ವಾದ ನಡೆದಿದೆ.

ಎಚ್. ಹುಲುಗಪ್ಪ ಎಂಬುವವರು ಶನಿವಾರ ಬೆಳಿಗ್ಗೆ ಗ್ರಾಮದ ಆಂಜನೇಯ ದೇಗುಲಕ್ಕೆ ತೆರಳಿದ್ದರು. ಆಗ ದೇವಸ್ಥಾನ ಆವರಣ ಶುಚಿಗೊಳಿಸುತ್ತಿದ್ದ ಪೂಜಾರಿ ವಿಶಾಲಾಕ್ಷಿ, ಸ್ವಲ್ಪ ಕಾಲ ತಡೆದು ಬರುವಂತೆ ಹುಲುಗಪ್ಪ ಅವರಿಗೆ ತಿಳಿಸಿದರು ಎನ್ನಲಾಗಿದೆ.

‘ನಾನು ದೇವಸ್ಥಾನ ಪ್ರವೇಶಿಸುವುದನ್ನು ಉದ್ದೇಶಪೂರ್ವಕವಾಗಿ ತಡೆದಿದ್ದೀರಿ’ ಎಂದು ಆಕ್ರೋಶಗೊಂಡ ಹುಲುಗಪ್ಪ, ಪೂಜಾರಿಯನ್ನು ನಿಂದಿಸಿದರು ಎನ್ನುವ ಆರೋಪ ಕೇಳಿಬಂದಿದೆ.

ವಿಷಯ ಗ್ರಾಮದಲ್ಲಿ ಹರಡುತ್ತಿದ್ದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲವರ ಮೇಲೆ ಹಲ್ಲೆಯೂ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕುರುಗೋಡು ಸಿಪಿಐ ವಿಶ್ವನಾಥ ಹಿರೇಗೌಡರ್, ಕುಡುತಿನಿ ಪಿಎಸ್‍ಐ ಹುಲಿಗೇಶ ಎಚ್. ಓಂಕಾರ್, ಕುರುಗೋಡು ಪಿಎಸ್‍ಐ ಸುಪ್ರೀತ್ ಸಿಬ್ಬಂದಿಯೊಂದಿಗೆ ಧಾವಿಸಿ ಗ್ರಾಮದಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ. ಗ್ರಾಮದಲ್ಲಿ ವಾತಾವರಣ ಸದ್ಯ ಯಥಾಸ್ಥಿತಿ ಮುಂದುವರಿದಿದೆ.

ಮೇ 21 ಮತ್ತು 22ರಂದು ಗ್ರಾಮ ದೇವತೆ ಕುಂಭೋತ್ಸವವನ್ನು ಗ್ರಾಮದ ಎಲ್ಲರು ಸೇರಿ ಸೌಹಾರ್ದ, ಸಂಭ್ರಮದಿಂದ ಆಚರಿಸಿದ್ದರು. ಇದರ ಬೆನ್ನಲ್ಲೆ ಗ್ರಾಮದಲ್ಲಿ ಪ್ರಸ್ತುತ ಘಟನೆ ನಡೆದಿದ್ದು, ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಕಂಪ್ಲಿ ತಾಲ್ಲೂಕು ಹೊನ್ನಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ
ಕಂಪ್ಲಿ ತಾಲ್ಲೂಕು ಹೊನ್ನಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT