ಬಳ್ಳಾರಿ: ಕೂಲಿ ಕಾರ್ಮಿಕರಿದ್ದ ಟೆಂಪೊವೊಂದು ತಾಲೂಕಿನ ಸಿಂಧುವಾಳ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಬಾಲಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯಲ್ಲಿ 16ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಮೋಕಾ ಗ್ರಾಮದ ರಘು (14) ಮೃತ ಬಾಲಕ. ವಾಹನದ ಟಯರ್ ಸ್ಫೋಟಿಸಿ ಈ ದುರ್ಘಟನೆ ನಡೆದಿದೆ ಎಂದು ಮೋಕಾ ಠಾಣೆಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ 20ಕ್ಕೂ ಅಧಿಕ ಮಂದಿಯನ್ನು ಸಾಗಿಸಲಾಗುತ್ತಿತ್ತು. ಎಲ್ಲರೂ ಆಂಧ್ರಪ್ರದೇಶಕ್ಕೆ ಹತ್ತಿ ಬಿಡಿಸಲು ಹೊರಟಿದ್ದರು ಎನ್ನಲಾಗಿದೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಕೆಲವರು ಮಂಗಳವಾರವೇ ಬಿಡುಗಡೆಯಾಗಿದ್ದರೆ, ಮತ್ತೆ ಕೆಲವರಿಗೆ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ವಿ.ಜೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.