ತೆಕ್ಕಲಕೋಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿದ್ದು, ರೈತರ ಉತ್ಸಾಹ ಇಮ್ಮಡಿಸಿದೆ. ಮಳೆಯಾಶ್ರಿತ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ.

ಕರೂರು, ತೆಕ್ಕಲಕೋಟೆ ಹೋಬಳಿ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಭೂಮಿ ಹದಗೊಳಿಸಿದ್ದ ರೈತರು ಅಲ್ಲಲ್ಲಿ ಮುಸುಕಿನ ಜೋಳ, ಜೋಳ, ಸಜ್ಜೆ, ನವಣೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

‘ಸಿರುಗುಪ್ಪ ತಾಲ್ಲೂಕಿನಲ್ಲಿ ಬಿತ್ತನೆಗಾಗಿ ರಿಯಾಯಿತಿ ದರದಲ್ಲಿ ವಿತರಿಸಲು ಬಿಪಿಟಿ ಭತ್ತ, ಆರ್ಎನ್ಆರ್ ಭತ್ತ, ಟಿಎಸ್ ತೊಗರಿ, ಡಿಎಚ್ಎಫ್ ನವಣೆ, ಸಜ್ಜೆ ಸಂಗ್ರಹಿಸಲಾಗಿದೆ’ ಎಂದು ಕೃಷಿ ಸಹಾಯಕ ನಿರ್ದೇಶಕ ಎಸ್.ಬಿ. ಪಾಟಿಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.