ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಹಾಲುಮತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Last Updated 7 ಮಾರ್ಚ್ 2023, 8:56 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): 2022–23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಲುಮತ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಜಿಲ್ಲಾ ಕುರುಬರ ಸಂಘ, ತಾಲ್ಲೂಕು ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಟ್ಟು ಗೌರವಿಸಲಾಯಿತು.

ಜಿಲ್ಲಾ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಮಾತನಾಡಿ, ಹಾಲುಮತ ಕುರುಬ ಸಮಾಜದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಮುಂದೆ ಉನ್ನತ ಶಿಕ್ಷಣ ಪಡೆದು, ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದು, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು ಎಂದರು.

ಸಮಾಜದ ಹಿರಿಯ ಮುಖಂಡ ಸಿದ್ದನಗೌಡ ಮಾತನಾಡಿ, ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಉತ್ತಮ ಕೆಲಸ. ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಇಂಥ ಕಾರ್ಯಕ್ರಮಗಳು ಅವಶ್ಯಕವಾಗಿವೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ, ಮುಖಂಡರಾದ ರಾಜಶೇಖರ ಹಿಟ್ನಾಳ್‌, ಆರ್.ಕೊಟ್ರೇಶ, ಕುರಿ ಶಿವಮೂರ್ತಿ, ರಾಮಚಂದ್ರಗೌಡ, ಶೇಖರ್ ಹೊರಪೇಟೆ, ಹಂಪಿ ವಿ.ವಿ.ಯ ಶ್ರೀನಿವಾಸ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ತಿಮ್ಮಪ್ಪ, ಪತ್ರಕರ್ತ ಬುಡ್ಡಿ ಬಸವರಾಜ, ವಕೀಲ ಎಚ್.ಮಹೇಶ, ಡಮ್ಮಿ ರುದ್ರಪ್ಪ, ದೇವೇಂದ್ರಪ್ಪ ಬೇಕರಿ ವೆಂಕಟೇಶ, ಸಿದ್ದೇಶ, ಎರಿಸ್ವಾಮಿ, ರಾಜಾಪುರ ನಾಗರಾಜ್, ಅಯ್ಯಾಳಿ ರಾಜಣ್ಣ, ಮಂಜುನಾಥ್ ಗೌಡ, ಈಟಿ ನಾಗರಾಜ, ತಾಯಪ್ಪ ಬಿಸಾಟಿ, ಯಮನೂರಪ್ಪ, ಬಲ್ಲೂರೇಶ, ತಿಮ್ಮಪ್ಪ, ಮಲ್ಲಯ್ಯ ಜಂಬಯ್ಯ ಸಂಕ್ಲಾಪುರ, ಮಲ್ಲಿಕಾರ್ಜುನ, ಟಿ.ವಿಶ್ವನಾಥ, ಉದೇದಪ್ಪ, ಶಿವರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT