ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಕಳ್ಳತನ ಆರೋಪಿ ಸೆರೆ: ಚಿನ್ನಾಭರಣ ವಶ

ಆರು ಕಡೆ ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಗೆ
Published 6 ಆಗಸ್ಟ್ 2024, 12:46 IST
Last Updated 6 ಆಗಸ್ಟ್ 2024, 12:46 IST
ಅಕ್ಷರ ಗಾತ್ರ

ಬಳ್ಳಾರಿ: ನಗರದ ಕೌಲ್‌ಬಜಾರ್‌ ಠಾಣೆ ವ್ಯಾಪ್ತಿಯ 6 ಕಡೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದು, ₹16.14 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ ಶೋಭಾರಾಣಿ ವಿ.ಜೆ ತಿಳಿಸಿದ್ದಾರೆ. 

ಕೊಳಗಲ್‌ ರಸ್ತೆಯ ಕರಿಮಾರೆಮ್ಮ ಕಾಲೋನಿಯ ಹನುಮಂತ (26) ಬಂಧಿತ ಆರೋಪಿ. 

‘ಕೌಲ್‌ಬಜಾರ್ ‌ಠಾಣೆ ವ್ಯಾಪ್ತಿಯಲ್ಲಿ ವರದಿಯಾಗುತ್ತಿದ್ದ ಕಳ್ಳತನ ಪ್ರಕರಣಗಳ ತನಿಖೆಗೆ ತಂಡ ರಚಿಸಲಾಗಿತ್ತು. ಅದರಂತೆ ಆಗಸ್ಟ್‌ 1ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ 269 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಠಾಣೆ ವ್ಯಾಪ್ತಿಯ 6 ಕಡೆ ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಹನುಮಂತ ಒಪ್ಪಿಕೊಂಡಿದ್ದಾನೆ‘ ಎಂದು ತಿಳಿಸಿದ್ದಾರೆ. 

ತನಿಖೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿಯ ಕಾರ್ಯಕ್ಕೆ ಎಸ್‌ಪಿ ಶೋಭಾರಾಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT