ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವು ಯೋಜನೆ’

Last Updated 10 ಜುಲೈ 2019, 8:28 IST
ಅಕ್ಷರ ಗಾತ್ರ

ಹೊಸಪೇಟೆ: ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯವು ನಗರದ ಕೆ.ಎಸ್‌.ಪಿ.ಎಲ್‌. ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಾಗಾರಕ್ಕೆ ಮಂಗಳವಾರ ಸಂಜೆ ತೆರೆ ಬಿತ್ತು.

ಕೃಷ್ಣಸಾಯಿ ಎಜ್ಯುಕೇಷನ್‌ ಟ್ರಸ್ಟ್‌ ಕಾರ್ಯದರ್ಶಿ ಕೃಷ್ಣಕುಮಾರಿ ಮಾತನಾಡಿ, ‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರಬೇಕು’ ಎಂದು ಸಲಹೆ ಮಾಡಿದರು.

‘ಸರ್ಕಾರದ ಯೋಜನೆಗಳ ಸದ್ಭಳಕೆ ವಿಷಯದಲ್ಲಿ ಮಹಿಳೆಯರು ಹೆಚ್ಚು ಜಾಗೃತರಾಗಬೇಕು. ಯಾವ ಇಲಾಖೆಯಲ್ಲಿ ಯಾವ ಸೌಲಭ್ಯ ಸಿಗುತ್ತದೆ ಎಂಬ ತಿಳಿವಳಿಕೆ ಇದ್ದರೆ ಅದರ ಲಾಭ ಪಡೆಯಬಹುದು. ಅಲ್ಪಸಂಖ್ಯಾತರ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ಧನ ಸರ್ಕಾರ ನೀಡುತ್ತಿದೆ. ಐ.ಎ.ಎಸ್‌., ಕೆ.ಎ.ಎಸ್‌. ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದವರಿಗೆ ಈ ಸೌಲಭ್ಯ ಸಿಗಲಿದೆ’ ಎಂದು ಮಾಹಿತಿ ನೀಡಿದರು.

ಕೆ.ಎಸ್‌.ಪಿ.ಎಲ್. ಕಾಲೇಜಿನ ಪ್ರಾಧ್ಯಾಪಕ ಮಂಜುನಾಥ ಮಾತನಾಡಿ, ‘ಪ್ರಧಾನಮಂತ್ರಿ ಯೋಜನೆಯಡಿಅಲ್ಪಸಂಖ್ಯಾತರಿಗಾಗಿ ವಿದ್ಯಾರ್ಥಿ ವೇತನ ಸೇರಿದಂತೆ ಇತರೆ 15 ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ. ಅದರ ಪ್ರಯೋಜನ ಪಡೆದು ಮುಂದೆ ಬರಬೇಕು’ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ರಾಕೇಶ್ ರಾಣಾ, ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಪರಶುರಾಮ್ ತಲೇವಾಡ್, ಸುನಂದಾ, ಭರತ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT