ಬಳ್ಳಾರಿ: ‘ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಸಾಲ ಸೌಲಭ್ಯಗಳನ್ನು ಬ್ಯಾಂಕ್ಗಳು ಫಲಾನುಭವಿಗಳಿಗೆ ಒದಗಿಸಬೇಕು. ಈ ಮೂಲಕ ಅವರ ಕಣ್ಣೀರು ಒರೆಸುವ ಮಾನವೀಯ ಪ್ರಯತ್ನ ಮಾಡಬೇಕು. ಇಲ್ಲವಾದರೆ, ಅಧಿಕಾರಿಗಳ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆಯುವೆ’ ಎಂದು ಸಂಸದ ಇ. ತುಕಾರಾಂ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ನ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಬಳ್ಳಾರಿ ಜಿಲ್ಲೆಯಲ್ಲಿರುವ ಗಣಿ, ಕೈಗಾರಿಕೆ, ನೀರಾವರಿ, ಕೃಷಿ ಚಟುವಟಿಕೆಯಿಂದ ನಡೆಯುತ್ತಿರುವ ವಾಣಿಜ್ಯ ವಹಿವಾಟುಗಳಿಂದಾಗಿ ಇಲ್ಲಿನ ಬ್ಯಾಂಕ್ಗಳಿಗೆ ಹಣ ಧಾರಾಳವಾಗಿ ಹರಿದುಬರುತ್ತಿದೆ. ಇದಕ್ಕೆ ಪ್ರತಿಯಾಗಿ ಕೇಂದ್ರದ ಯೋಜನೆಗಳನ್ನು ಸರಿಯಾಗಿ ಜಾರಿಗೆ ತರದೇ ಹೋದರೆ ಹೇಗೆ? ಬಡವರಿಗೆ ಸಾಲಸೌಲಭ್ಯ ಕೊಡದಿದ್ದರೆ ಹೇಗೆ? ಎಂದು ಅವರು ಪ್ರಶ್ನೆ ಮಾಡಿದರು. ಅಲ್ಲದೆ, ಜನರಿಗೆ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು’ ಎಂದು ಅವರು ಕಟ್ಟಪ್ಪಣೆ ವಿಧಿಸಿದರು.

ಜನರಿಗೆ ಸಾಲ ಸೌಲಭ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಬ್ಯಾಂಕ್ಗಳಿಗೆ ನೋಟಿಸ್ ಜಾರಿ ಮಾಡುವಂತೆ ಅವರು ಸಭೆಯಲ್ಲಿದ್ದ ಜಿಲ್ಲಾ ಪಂಚಾಯಿತಿ ಸಿಇಒಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ‘ಬ್ಯಾಂಕ್ಗಳು ಸಾಮಾನ್ಯ ಜನರ ಬೆನ್ನೆಲುಬಾಗಬೇಕು. ಬ್ಯಾಂಕ್ಗಳು ನೀಡುವ ಸಾಲ ಸೌಲಭ್ಯಗಳು ಉಪಕಾರ ಮತ್ತು ವ್ಯವಹಾರವೇ ಹೊರತು, ದಾನ–ಧರ್ಮವಲ್ಲ. ಈ ಅಂಶವನ್ನು ಬ್ಯಾಂಕ್ ಅಧಿಕಾರಿಗಳು ಮನವರಿಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತ ಜನಸಾಮಾನ್ಯರಿಗೆ ಮಾಹಿತಿ ನೀಡಲು ಸಿಎಸ್ಆರ್ ಅನುದಾನದಡಿ ಎಲ್ಇಡಿ ವಾಹನ ಖರೀದಿಸುವಂತೆ ಜಿ.ಪಂ ಸಿಇಒ ಅವರಿಗೆ ಸಂಸದ ತಿಳಿಸಿದರು.

ಇದೇ ವೇಳೆ ಉದ್ಯೊಗಿನಿ, ಪಿಎಂಇಜಿಪಿ, ಪಿಎಂ ಸ್ವನಿಧಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಸಭೆಗೂ ಮುನ್ನ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಿಮೆ ಹೊಂದಿದ್ದ ಇಬ್ಬರು ವಿಮಾದಾರರ ನಾಮನಿರ್ದೇಶಿತರಿಗೆ ತಲಾ ₹2 ಲಕ್ಷ ಮೌಲ್ಯದ 2 ಚೆಕ್ಗಳನ್ನು ಹಸ್ತಾಂತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಎಜಿಎಂ ಪ್ರಭಾಕರ್. ಆರ್, ಕೆನರಾ ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕ ಅರುಣಕುಮಾರ್ ಎ.ಜೆ., ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಿರೀಶ್ ವಿ.ಕುಲಕರ್ಣಿ, ನಬಾರ್ಡ್ನ ಎಜಿಎಂ ಯುವರಾಜ ಕುಮಾರ್ ಆರ್.ಎಸ್., ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಂಕ್ಗಳ ಆರ್ಎಂ ಅಧಿಕಾರಿಗಳು ಹಾಜರಿದ್ದರು.

ಬ್ಯಾಂಕ್ಗಳು ಉಳಿಸಿಕೊಂಡಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಹಾಗೂ ಬ್ಯಾಂಕ್ ಅಧಿಕಾರಿಗಳು ನಿಯಮಿತವಾಗಿ ಸಭೆ ನಡೆಸಬೇಕು. ಪರಸ್ಪರ ಸಮನ್ವಯತೆ ಇರಬೇಕು
–ಇ. ತುಕಾರಾಂ ಸಂಸದ

‘ಸಮನ್ವಯತೆಯ ಕೊರತೆ’

‘ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ. ಇದರಿಂದ ಸರ್ಕಾರದ ಯೋಜನೆಗಳು ಯಶಸ್ಸು ಕಾಣುತ್ತಿಲ್ಲ. ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಬ್ಯಾಂಕ್ಗಳ ಮುಖಾಂತರ ನಿಗದಿತ ಕಾಲಮಿತಿಯಲ್ಲಿಯೇ ದೊರಕಿಸಿದರೆ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ’ ಎಂದು ಅವರು ಸಂಸದ ಇ. ತುಕಾರಾಂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.