ಬಳ್ಳಾರಿಯಲ್ಲಿ ಮಾತನಾಡಿದ ಅವರು, ‘ಗೇಟ್ ಅಳವಡಿಸಲು ಸಿಬ್ಬಂದಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ತಂಡದಲ್ಲಿರುವ ಒಟ್ಟು 35 ಮಂದಿಗೆ ಖುದ್ದು ಸನ್ಮಾನ ಮಾಡಿ, ₹50 ಸಾವಿರ ನಗದು ನೀಡುವುದಾಗಿ ಹೇಳಿದ್ದೆ. ಆದರೆ ಅನಿವಾರ್ಯ ಕಾರಣಗಳಿಂದ ಬೆಂಗಳೂರಿಗೆ ತುರ್ತಾಗಿ ತೆರಳಬೇಕಿದೆ. ಇನ್ನೆರಡು ಮೂರು ದಿನಗಳಲ್ಲಿ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗುವುದು’ ಎಂದು ತಿಳಿಸಿದರು.