ಬಳ್ಳಾರಿ: ತುಂಗಭದ್ರಾ ಕೊಳ್ಳದ ಜಿಲ್ಲೆಗಳಲ್ಲಿ ಎರಡನೇ (ಬೇಸಿಗೆ) ಬೆಳೆಗೆ ನೀರು ಒದಗಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯು ಸಿರುಗುಪ್ಪದಿಂದ ಹೊಸಪೇಟೆವರೆಗೆ ನವೆಂಬರ್ 12 ರಿಂದ 17ರವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

‘ಸಿರುಗುಪ್ಪ ತಾಲ್ಲೂಕಿನ ಕರೂರಿನಿಂದ ಪಾದಯಾತ್ರೆ ಆರಂಭವಾಗಿ ಕುರುಗೋಡು, ಕಂಪ್ಲಿ ಮೂಲಕ ಸಾಗಿ ನ.17ಕ್ಕೆ ತುಂಗಭದ್ರಾ ಜಲಾಶಯದ ಎದುರು ಸಮಾವೇಶಗೊಳ್ಳಲಿದೆ. ಬಳಿಕ ಅನಿರ್ದಿಷ್ಟ ಧರಣಿ ನಡೆಯಲಿದೆ’ ಎಂದು ರೈತಸಂಘದ ಅಧ್ಯಕ್ಷ ಕರೂರು ಆರ್. ಮಾಧವ ರೆಡ್ಡಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಈಗಿರುವ ಬೆಳೆಗೆ ಡಿಸೆಂಬರ್ವರೆಗೆ ನೀರು ಪೂರೈಸಬೇಕು. ಬಳಿಕ ಎರಡನೇ ಬೆಳೆಗೆ ನೀರು ಒದಗಿಸಬೇಕು. ಜಲಾಶಯದ ಎಲ್ಲ ಗೇಟ್ಗಳನ್ನು ಮುಂದಿನ ಜೂನ್ ವೇಳೆಗೆ ಅಳವಡಿಸಬೇಕು. ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ರೈತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು’ ಎಂದು ತಿಳಿಸಿದರು.

14ಕ್ಕೆ ಐಸಿಸಿ ಸಭೆ: ಜಲಾಶಯದ ನೀರಾವರಿ ಸಲಹಾ ಸಮತಿಯ ಸಭೆ ನ. 14ರಂದು ನಡೆಯಲಿದೆ. ಸಮಿತಿಯ ಅಧ್ಯಕ್ಷ, ಸಚಿವ ಶಿವರಾಜ ತಂಗಡಗಿ, ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಭಾಗವಹಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.