ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣು, ನೀರು ಸಂರಕ್ಷಣೆಗೆ ಆದ್ಯತೆ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದಯಾನಂದ

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದಯಾನಂದ ಹೇಳಿಕೆ
Published 12 ಮೇ 2023, 13:32 IST
Last Updated 12 ಮೇ 2023, 13:32 IST
ಅಕ್ಷರ ಗಾತ್ರ

ಕುರುಗೋಡು: ‘ಜಲಸಂಜೀವಿನಿ ಯೋಜನೆಯಡಿ ಮಣ್ಣು ಮತ್ತು ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಹೊಂಡ, ನಾಲಾ ಸ್ವಚ್ಛತೆ, ಕೆರೆ ಹೂಳೆತ್ತುವ ರೈತರ ಜಮೀನುಗಳಲ್ಲಿ ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದಯಾನಂದ ಹೇಳಿದರು.

ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದ ಬಳಿ ನಾಲಾ ಸ್ವಚ್ಛತೆ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಅವರು ಪರಿಶೀಲಿಸಿ ಮಾತನಾಡಿದರು.

‘ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಂಗವಿಕಲರಿಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಯೋಜನೆ ರೂಪಿಸಿದೆ. ಮಹಿಳೆ ಮತ್ತು ಪುರುಷರು ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ’ ಎಂದರು.

ಕೃಷಿ ಅಧಿಕಾರಿ ಎಂ.ದೇವರಾಜ್, ‘ರೈತರು ತಮ್ಮ ಹೊಲಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಿಂದ ಬದುನಿರ್ಮಾಣ, ಚೆಕ್‍ಡ್ಯಾಂ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಎರೆಹುಳಗೊಬ್ಬರ ತೊಟ್ಟಿ ನಿರ್ಮಾಣ ಕಾಮಗಾರಿಗಳನ್ನು ಮಾಡಿಸಿ ಆದಾಯ ಹೆಚ್ಚಿಸಿಕೊಳ್ಳಬಹುದು. ಕಾರ್ಮಿಕರಿಗೆ ತಲಾ ₹316 ಕೂಲಿ ನೀಡಲಾಗುತ್ತಿದೆ’ ಎಂದರು.

ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದಲ್ಲಿ ಜರುಗುತ್ತಿರುವ ನಾಲಾ ಸ್ವಚ್ಛತೆ ಕಾಮಗಾರಿಯಲ್ಲಿ ಶುಕ್ರವಾರ 63 ಮಂದಿ ಕಾರ್ಮಿಕರು ಭಾಗವಹಿಸಿದ್ದರು.

ಮೇಟಿ ಲಾಲ್‍ಸ್ವಾಮಿ ಮತ್ತು ಎಕೆ.ಮಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT