ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಕಡಿತ: ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

Published 6 ಫೆಬ್ರುವರಿ 2024, 14:18 IST
Last Updated 6 ಫೆಬ್ರುವರಿ 2024, 14:18 IST
ಅಕ್ಷರ ಗಾತ್ರ

ತೆಕ್ಕಲಕೋಟೆ: ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಯಲ್ಲಿ ₹300 ಕೋಟಿ ಅನುದಾನ ಕಡಿತಗೊಳಿಸಿದ್ದು, ಇದು ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಮಾಡಿದ ಅನ್ಯಾಯ ಎಂದು ಆರೋಪಿಸಿ ಸಿರುಗುಪ್ಪ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಉಮಾದೇವಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ನಾಡಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ಬಜೆಟ್ ನೀತಿ ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

‘ಕೇಂದ್ರ ಸರ್ಕಾರವು ಅನುದಾನ ಕಡಿತಗೊಳಿಸಿದ್ದರಿಂದ 2 ಕೋಟಿ ತಾಯಂದಿರು ಹಾಗೂ 8 ಕೋಟಿ ಮಕ್ಕಳ ಆರೋಗ್ಯ, ಆಹಾರ ಮತ್ತು ಶಿಕ್ಷಣದ ಹಕ್ಕನ್ನು ಕಸಿದು ಕೊಂಡಂತೆ ಆಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ತೆಕ್ಕಲಕೋಟೆ ಹೋಬಳಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮಾನವ ಸರಪಳಿ ರಚಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

 ತಾಲ್ಲೂಕು ಆಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶಕುಂತಲ, ಖಜಾಂಚಿ ಎಂ.ಖಾಜಾಬಿ, ಪದಾಧಿಕಾರಿಗಳಾದ ಕೆ.ನೀಲಾವತಿ, ಜೆ. ಈರಮ್ಮ, ಎಸ್.ಎಂ.ಚಂದ್ರಕಲಾ, ವಿ. ಪಾರ್ವತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT