ಕೇಂದ್ರದಲ್ಲಿ ಇರುವ ವೈದ್ಯಕೀಯ ಸಿಬ್ಬಂದಿ ಜನರಿಗೆ ಸೇವೆ ನೀಡುತ್ತಿದ್ದಾರೆ. ಜನಸಂಖ್ಯೆ ಆಧಾರದಲ್ಲಿ ಮೇಲ್ದರ್ಜೆಗೇರಿಸುವ ಅಗತ್ಯವಿದೆ
ಕೆ.ನಾಗರಾಜ ಗುತ್ತಿಗೆ ವೈದ್ಯ
ಜಿಲ್ಲಾಡಳಿತಕ್ಕೆ ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆ ಕಾಣುತ್ತಿಲ್ಲ. ಸರ್ಕಾರಿ ಸೌಲಭ್ಯ ಪಡೆಯಲು ಹೋರಾಟ ಅನಿವಾರ್ಯವಾಗಿದೆ
ಲಕ್ಷ್ಮಣ ಭಂಡಾರಿ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ
ಕಾರ್ಯರೂಪಕ್ಕೆ ಬರದ ಆದೇಶ
2022ರಲ್ಲಿ ಜಿಲ್ಲೆಯ ಸಿರಿಗೇರಿ ಎಮ್ಮಿಗನೂರು ಮತ್ತು ಗುಡೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಅನುಮೋದನೆ ನೀಡಿತ್ತು. ಅಂದಿನ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಜಿಲ್ಲಾ ಖನಿಜ ನಿಧಿಯಲ್ಲಿ ಪ್ರತಿ ಕೇಂದ್ರಕ್ಕೆ ₹6.80 ಕೋಟಿ ಮೀಸಲಿಡಲಾಗಿದೆ ಎಂದು ಆದೇಶ ಪ್ರತಿ ಕಳುಹಿಸಿದ್ದರು. ಆದರೆ ಈವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎನ್ನಲಾಗಿದೆ.