ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಳ್ಳಾರಿ ನಗರದಲ್ಲಿ ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದ ಬಿಜೆಪಿ ನಾಯಕರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದರು.
.ವಾಲ್ಮೀಕಿ ನಿಗಮದ ಹಗರಣ | ಮತ್ತೆ ₹10 ಕೋಟಿ ಜಪ್ತಿ: ಮತ್ತೊಬ್ಬ ಆರೋಪಿ ಬಂಧನ.
ಧರಣಿ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಬಂದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಡಿಎಸ್ಪಿ ಚಂದ್ರಕಾಂತ ನಂದ ರೆಡ್ಡಿ ಮತ್ತು ಸಿಬ್ಬಂದಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ವಶಕ್ಕೆ ಪಡೆದರು. ಕಾರ್ಯಕರ್ತರನ್ನೂ ಬಸ್ನಲ್ಲಿ ಕರೆದೊಯ್ಯಲಾಯಿತು. ಈ ವೇಳೆ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಿಕ್ಕಾರ ಕೂಗಲಾಯಿತು.

ಇದರೊಂದಿಗೆ ಎರಡು ದಿನಗಳಿಂದ ನಡೆಯುತ್ತಿದ್ದ ಬಿಜೆಪಿ ಹೋರಾಟ ಅಂತ್ಯವಾಯಿತು.

‘ವಾಲ್ಮೀಕಿ ನಿಗಮದಲ್ಲಿ ಸರ್ಕಾರದ ಪಾತ್ರ ಇರುವುದರಿಂದ ಸಿಎಂ ರಾಜೀನಾಮೆ ನೀಡಬೇಕು. ಶಾಸಕ ಬಿ.ನಾಗೇಂದ್ರ ಅವರನ್ನು ಕೂಡಲೇ ಬಂಧಿಸಬೇಕು. ಹಗರಣದ ಪ್ರತಿ ಪೈಸೆಯನ್ನೂ ವಸೂಲಿ ಮಾಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು‘ ಎಂದು ಬಿಜೆಪಿ ಆಗ್ರಹಿಸಿದೆ.
.ಬಳ್ಳಾರಿ | ವಾಲ್ಮೀಕಿ ನಿಗಮ ಹಗರಣ: ಶ್ರೀರಾಮುಲು ಧರಣಿ ಮುಂದುವರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.