ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

‘ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಹಗರಣಕ್ಕೆ ಸಂಬಂಧಿಸಿದ ಶಾಸಕ ಬಿ. ನಾಗೇಂದ್ರ ಸೇರಿ ಎಲ್ಲರನ್ನೂ ಬಂಧಿಸಬೇಕು’ ಎಂದು ಅವರು ಆಗ್ರಹಿಸಿರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕ, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರೂ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.