ಕುರುಗೋಡು: ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆ ಜಾರಿಗೆ ತರಲಾಗಿದೆ ಎಂದು ಬಳ್ಳಾರಿ ಕ್ಷೇತ್ರದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ವಿಬಿ-ಜಿ ರಾಮ್ ಜಿ ಯೋಜನೆ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಜನರ ಸ್ವಾವಲಂಬಿ ಬದುಕಿನ ಭರವಸೆಯ ದೂರದೃಷ್ಟಿಯ ವಿಬಿ-ಜಿ ರಾಮ್ ಜಿ ಯೋಜನೆ ಪಾರದರ್ಶಕ ನಿರ್ವಹಣೆ, ತಂತ್ರಜ್ಞಾನದ ಕಾವಲು ಮತ್ತು ಶಾಶ್ವತ ಗ್ರಾಮೀಣ ಮೂಲ ಸೌಕರ್ಯಕ್ಕೆ ಸಹಕಾರಿಯಾಗಿದ್ದುಮ ಈ ಕುರಿತು ಗ್ರಾಮೀಣ ಭಾಗದ ಜನರಿಗೆ ಬಿಜೆಪಿ ಕಾರ್ಯಕರ್ತರು ಮಾಹಿತಿ ನೀಡಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ತಿಮ್ಮಾರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ರಾಜ್ಯದ ಕಾಂಗ್ರೆಸ್ ನಾಯಕರು ನಕಲಿ ಗಾಂಧಿಗಳ ಸ್ವಾಮಿ ನಿಷ್ಠೆ ಮೆರೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮನರೇಗಾ ಯೋಜನೆಯಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ. ಬಡವರ ಜಾಬ್ಕಾರ್ಡ್ಗಳನ್ನು ದುರ್ಬಳಕೆ ಮಾಡಿಕೊಂಡು ಯೋಜನೆಯ ಹಣ ಕಬಳಿಸುತ್ತಿದ್ದರು. ಯೋಜನೆಯ ಹಣ ನೇರವಾಗಿ ಫಲಾನುಭವಿಗಳ ಕೈಗೆ ಸೇರಿವಂತೆ ಮಾಡಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ. ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಯೋಜನೆ ಕುರಿತು ಪ್ರಚಾರ ಮಾಡಬೇಕು ಎಂದರು.

ಗಾಂಧಿ ಹೆಸರು ತೆಗೆದು ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿದೆ. ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಜಾರಿಗೆ ತಂದು ಗುಡಿ ಕೈಗಾರಿಕೆಗಳಿಗೆ ಶಕ್ತಿ ತುಂಬುವ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಕಾರ್ಯಕ್ರಮ ಕುರಿತು ಪ್ರಸ್ತಾವಿಕ ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನೀಲ್ ಕುಮಾರ್ ಮೋಕಾ, ಪ್ರಧಾನ ಕಾರ್ಯದರ್ಶಿ ಸುರೇಶ್, ಕಂಪ್ಲಿ ಮಂಡಲ ಅಧ್ಯಕ್ಷ ಮಹದೇವ, ಮುಖಂಡರಾದ ಗಾಳಿ ಶಂಕ್ರಪ್ಪ, ಜೆ.ಸೋಮಶೇಖರಗೌಡ, ತಿಪ್ಪೇರುದ್ರಗೌಡ ಮತ್ತು ಆಗಲೂರು ಲತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.