ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಅಂಬರೀಷ್ ಅವರು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಅವರು ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಖಜಾನೆ ಇಲಾಖೆಯ ಉಪನಿರ್ದೇಶಕ ವೆಂಕಟೇಶಮೂರ್ತಿ, ಶಿರಸ್ತೇದಾರರಾದ ಶ್ರೀಧರ್, ಅಮರನಾಥ್ ಇತರರಿದ್ದರು.