ಹೊಸಪೇಟೆ (ವಿಜಯನಗರ): ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಸಹಭಾಗಿತ್ವದಲ್ಲಿ ನಗರದಲ್ಲಿ ಸೋಮವಾರ ಮತದಾನ ಜಾಗೃತಿ ಅಭಿಯಾನ ಹಾಗೂ ಸ್ವಚ್ಛತೆ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವಪ್ರಭು ಅವರು ನಗರದ ನೆಹರೂ ಕಾಲೊನಿ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ಕೊಟ್ಟರು.
‘ನಗರದ ವಿವಿಧ ವಾರ್ಡುಗಳಲ್ಲಿ ಕಸ ಸಂಗ್ರಹಿಸುವ ನಗರಸಭೆ ಕಸ ಸಂಗ್ರಹಣೆಯ ವಾಹನಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಅವುಗಳ ಮೂಲಕ ಮತದಾನದ ಜಾಗೃತಿ ಹಾಗೂ ಯುವ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸುವ ಕುರಿತು ಪ್ರಚಾರ ಕೈಗೊಳ್ಳಲಾಗುತ್ತದೆ. ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಜನ ಪಾಲ್ಗೊಳ್ಳಬೇಕು’ ಎಂದು ಹೇಳಿದರು.
ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ ಸೇರಿದಂತೆ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.