ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಗೋಡು: ಗಮನಸೆಳೆದ ಎತ್ತಿನ ಬಂಡಿಯಲ್ಲಿ ಮತದಾನ ಜಾಗೃತಿ ಜಾಥಾ

Published 18 ಏಪ್ರಿಲ್ 2024, 14:39 IST
Last Updated 18 ಏಪ್ರಿಲ್ 2024, 14:39 IST
ಅಕ್ಷರ ಗಾತ್ರ

ಕುರುಗೋಡು: ತಾಲ್ಲೂಕಿನ ಓರ್ವಾಯಿ ಮತ್ತು ಗೆಣಿಕೆಹಾಳು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುರುಗೋಡು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಗುರುವಾರ ಎತ್ತಿನಬಂಡಿ ಜಾಥಾ ನಡೆಸಿ ಮತದಾನ ಜಾಗೃತಿ ಮೂಡಿಸಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಎತ್ತಿನಬಂಡಿ ಜಾಥಾದಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.

ಗೆಣಿಕೆಹಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮಿ ಮತ್ತು ಓರ್ವಾಯಿ ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ತಿಮ್ಮಪ್ಪ ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT