ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋತೆನೆಂದು ದೂರು ಉಳಿಯಲ್ಲ: ಶ್ರೀರಾಮುಲು 

Published 6 ಜೂನ್ 2024, 15:54 IST
Last Updated 6 ಜೂನ್ 2024, 15:54 IST
ಅಕ್ಷರ ಗಾತ್ರ

ಬಳ್ಳಾರಿ: ‘ಸೋತೆ ಎಂದ ಮಾತ್ರಕ್ಕೆ ನಿಮ್ಮಿಂದ ದೂರ ಉಳಿಯಲ್ಲ. ನಿರಂತರವಾಗಿ ನಿಮ್ಮ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ‘ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 

ಚುನಾವಣೆ ಸೋಲಿನ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಪ್ರಕಟಿಸಿರುವ ಅವರು, ‘ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಆದರು ಕೂಡ ನನ್ನ ಮೇಲೆ ನಂಬಿಕೆ ಇರಿಸಿ, ಮತದಾನ ಮಾಡಿದ ಬಳ್ಳಾರಿ–ವಿಜಯನಗರ ಲೋಕಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಚುನಾವಣೆಯಲ್ಲಿ ಸೋತೆ ಎಂದ ಮಾತ್ರಕ್ಕೆ ನಿಮ್ಮಿಂದ ದೂರ ಉಳಿಯುವುದಿಲ್ಲ. ನಿರಂತರವಾಗಿ ನಿಮ್ಮ ಸೇವೆ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ. 

‘ಚುನಾವಣೆ ದಿನಾಂಕ ಘೋಷಣೆ ಆದಾಗಿನಿಂದ ನಿರಂತರವಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ,
ನಾಯಕರಿಗೆ, ಪದಾಧಿಕಾರಿಗಳಿಗೆ ಹಾಗೂ ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ‘ ಎಂದು ಅವರು ಬರೆದುಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT