ಮೂಡಲಗಿ: ‘ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದು. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ, ಮಗಳಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಎಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ’ ಎಂದು ಪ್ರಾಚಾರ್ಯೆ ಅನ್ನಪೂರ್ಣ ಕುರಬೇಟ ಹೇಳಿದರು.

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಭಾನುವಾರ ಆಚರಿಸಿದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚಣೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಸಹ ಈಗಿನ ಆಧುನಿಕ ದಿನಗಳಲ್ಲಿ ಮಹಿಳೆಯು ಪ್ರತಿ ಕ್ಷೇತ್ರದಲ್ಲಿ ತನ್ನದೆಯಾದ ಛಾಪು ಮೂಡಿಸುತ್ತಿದ್ದಾಳೆ. ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದರು.

ಚೇತನ ಜೋಗನ್ನವರ, ಈಶ್ವರ ಬೆಳವಿ, ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ಈರಪ್ಪ ಕಳ್ಳಸನ್ನವರ ಮಾತನಾಡಿದರು. ಪ್ರಾಚಾರ್ಯ ಡಾ.ಸುರೇಶ ಹನಗಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಾಳವ್ವ ಕಂಕಣವಾಡಿ, ಶಾಂತಾ ಪಾಟೀಲ, ನೀಲವ್ವ ಹೆಬ್ಬಾಳ, ಎನ್ಎಸ್ಎಸ್ ಯೋಜನಾಧಿಕಾರಿ ಶಂಕರ ನಿಂಗನೂರ, ಡಿ.ಎಸ್.ಹುಗ್ಗಿ, ಮುಸ್ತಫಾ ಜಾಲಗಾರ, ಬಿ.ಸಿ.ಮಾಳಿ, ಸುಶ್ಮಿತಾ ಹೊರಟ್ಟಿ ಸಂಗಡಿಗರು ಪ್ರಾರ್ಥಿಸಿದರು, ವಿ.ವೈ.ಕಾಳೆ ಸ್ವಾಗತಿಸಿದರು. ಡಾ.ರಾಜಶ್ರೀ ತೋಟಗಿ ನಿರೂಪಿಸಿದರು. ಅಕ್ಷತಾ ಮೇದಾರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.