ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಹಡಗಲಿ; ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

Published 21 ಜುಲೈ 2023, 14:30 IST
Last Updated 21 ಜುಲೈ 2023, 14:30 IST
ಅಕ್ಷರ ಗಾತ್ರ

ಹೂವಿನಹಡಗಲಿ : ತಾಲ್ಲೂಕಿನ ಅಂಗೂರು ಗ್ರಾಮದ ಗರ್ಭಿಣಿಯೊಬ್ಬರು ಶುಕ್ರವಾರ ಅಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಅಂಗೂರು ಗ್ರಾಮದ ಮಹಿಳೆ ಅಕ್ಕಮಹಾದೇವಿ ಅವರನ್ನು ಬೆಳಗಿನಜಾವ ಹೆರಿಗೆಗಾಗಿ ಅಂಬುಲೆನ್ಸ್ ನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ.

ಅಂಬುಲೆನ್ಸ್ ನಲ್ಲಿದ್ದ ಏಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ ವಿ.ಕೃಷ್ಣ ನಾಯ್ಕ ವಾಹನ ನಿಲ್ಲಿಸಿ, ಸಹಜ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ.

ನಂತರ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT