ಹರಪನಹಳ್ಳಿ : ಕುಟುಂಬಗಳು ಆರ್ಥಿಕ ಸಬಲೀಕರಣ ಹೊಂದುವಲ್ಲಿ ಮಹಿಳೆಯರು ಪಾತ್ರ ದೊಡ್ಡದು ಎಂದು ಚಿಗಟೇರಿ ಠಾಣೆ ಎಸ್ಐ ಕೆ.ನಾಗರತ್ನ ತಿಳಿಸಿದರು.

ಹರಪನಹಳ್ಳಿ ನಗರಕ್ಕೆ ಸಮೀಪದ ದೇವರ ತಿಮಲಾಪುರ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶನಿವಾರ ನಡೆದ ತಾಲೂಕು ಮಟ್ಟದ ಮಹಿಳಾ ಜ್ಞಾನ ವಿಕಾಸ ಮತ್ತು ವಿಚಾರ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಕಾಳಜಿವಹಿಸಬೇಕು. ಹೊರಗಡೆ ಸಭೆ ಸಮಾರಂಭಗಳಿಗೆ ಹೋಗುವಾಗ ದೇಹದ ಮೇಲೆ ಹಾಕಿಕೊಂಡಿರುವ ಆಭರಣಗಳ ಬಗ್ಗೆ ಜಾಗೃತಿ ಇರಬೇಕು. ಮಹಿಳೆಯರ ರಕ್ಷಣೆಗಾಗಿ ಪೊಲೀಸ್ ಇಲಾಖೆ ವಿಜಯ ಪೊಲೀಸ್ ಪಡೆ ರಚಿಸಲಾಗಿದ್ದು, ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಲು ಸಲಹೆ ನೀಡಿದರು.

ಚಿತ್ರದುರ್ಗ ಧರ್ಮಸ್ಥಳ ಸಂಘದ ಪ್ರಾದೇಶಿಕ ನಿರ್ದೇಶಕಿ ಗೀತಾ ಮಾತನಾಡಿ, ಮಹಿಳೆಯರು ಮೊಬೈಲ್, ಟಿವಿ, ಧಾರವಾಹಿಗಳಿಗೆ ಗಮನ ಕೊಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎನ್ ಎಸ್ ಮಮತಾ, ಕುಸುಮಾ ಜಗದೀಶ್, ಕ್ಷೇತ್ರ ಯೋಜನಾಧಿಕಾರಿ ಬಾಬು, ಗೀತಾ, ಅನಿತಾ ಮತ್ತು ಉಪನ್ಯಾಸಕಿ ಸುವರ್ಣ ಆರುಂಡಿ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಮೇಲ್ವಿಚಾರಕಿಯರು ಹಾಗೂ ಸೇವಾ ಪ್ರತಿನಿಧಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.