ಹಗರಿಬೊಮ್ಮನಹಳ್ಳಿ: ‘ಸ್ವ ಉದ್ಯೋಗದ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡಾಗ ಮಾತ್ರ ಸ್ವಾವಲಂಬಿಗಳಾಗಿ ಬದುಕಲು ಸಾಧ್ಯ’ ಎಂದು ಎಸ್ಎಲ್ಆರ್ ಮೆಟಾಲಿಕ್ಸ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ರಜನಿ ದೇಸಾಯಿ ಹೇಳಿದರು.

ತಾಲ್ಲೂಕಿನ ವರದಾಪುರ ಗ್ರಾಮದಲ್ಲಿ ಎಸ್.ಎಲ್.ಆರ್ ಮೆಟಾಲಿಕ್ಸ್ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೆಷನಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ 6 ತಿಂಗಳು ಹೊಲಿಗೆ ಯಂತ್ರ ಉಚಿತ ತರಬೇತಿ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ‘ಮಹಿಳೆಯರು ಸ್ವಯಂ ಉದ್ಯೋಗದಿಂದ ಇಡೀ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಲು ಸಾಧ್ಯವಾಗುತ್ತದೆ’ ಎಂದರು.

ಸಿ.ಎಸ್.ಆರ್ ವಿಭಾಗದ ಮುಖ್ಯಸ್ಥ ಕೆ.ಮಲ್ಲಿಕಾರ್ಜುನ ಮಾತನಾಡಿ, ‘ತರಬೇತಿ ಪಡೆದುಕೊಂಡು ಟೈಲರಿಂಗ್ ಅಂಗಡಿ ತೆರೆಯಬಹುದು ಜತೆಗೆ ಇತರರಿಗೆ ತರಬೇತಿ ನೀಡಿದಾಗ ಮಾತ್ರ ಎಲ್ಲರ ಬದುಕು ಸಾರ್ಥಕವಾಗುತ್ತದೆ’ ಎಂದರು.

ಸಂಸ್ಥೆಯ ಅಧ್ಯಕ್ಷ ಯು.ಭೀಮರಾಜ ಪ್ರಾಸ್ತಾವಿಕ ಮಾತನಾಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಖಿಲ ಭಾನು, ಗ್ರಾಮ ಪಂಚಾಯಿತಿ ಸದಸ್ಯ ಕುಮಾರೆಪ್ಪ, ಹುಸೇನ್ ಪೀರ್, ವಿರೂಪಾಕ್ಷ ಗೌಡ್ರು, ವೆಂಕಟೇಶ, ಎಚ್.ಕೆ ಶಿವಪ್ಪ, ಮರಿಬಸಪ್ಪ, ಲಿಂಗನಗೌಡ್ರು, ಪ್ರಭು, ಬಸವರಾಜ, ತರಬೇತಿ ಶಿಕ್ಷಕಿ ಸುವರ್ಣಮ್ಮ ಲಕ್ಷ್ಮೀ ವಡ್ಡರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.