ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರಪನಹಳ್ಳಿ: ಜೈಲಿನಲ್ಲಿ ತಂಬಾಕು ನಿಷೇಧ ದಿನ ಆಚರಣೆ

Published 31 ಮೇ 2024, 13:39 IST
Last Updated 31 ಮೇ 2024, 13:39 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ಕಂಭಟ್ರಹಳ್ಳಿ ಸಮೀಪವಿರುವ ಉಪಕಾರಾಗೃಹದಲ್ಲಿ ಶುಕ್ರವಾರ ವಿಶ್ವ ತಂಬಾಕು ನಿಷೇಧ ದಿನ ಆಚರಿಸಿ, ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳಿಗೆ ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರಾಗೃಹ ಮತ್ತುಸುಧಾರಣಾ ಸೇವೆ ಇಲಾಖೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ್ ಮಾತನಾಡಿ, ‘ತಂಬಾಕು ಭಾರತದ ಎಲ್ಲ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ದೊಡ್ಡ ಅಪಾಯವಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ಕಾಯಿಲೆಗಳು ಮತ್ತು ಕ್ಯಾನ್ಸರ್ ಸೇರಿದಂತೆ ಹೆಚ್ಚಿನ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ಇದು ಸಾಮಾನ್ಯ ಅಪಾಯಕಾರಿ ಅಂಶವಾಗಿದೆ’ ಎಂದು ಹೇಳಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಹಾಲಸ್ವಾಮಿ ಮಾತನಾಡಿ, ತಂಬಾಕು ಸೇವನೆಯಿಂದ ಮನುಷ್ಯನ ಸುಂದರ ಜೀವನವನ್ನೆ ಹಾಳು ಗೆಡುವುತ್ತದೆ. ಇದಕ್ಕೆ ಅವಕಾಶ ಕೊಡದೇ ದುಶ್ಚಟಗಳು, ಕೆಟ್ಟ ಆಲೋಚನೆಗಳಿಂದ ದೂರವಿರಲು ಸಲಹೆ ನೀಡಿದರು. ವಕೀಲ ಎಂ.ಮೃತ್ಯುಂಜಯ ತಂಬಾಕು ನಿಷೇಧ ಕುರಿತು ಉಪನ್ಯಾಸ ನೀಡಿದರು. ಉಪ ಕಾರಾಗೃಹ ಅಧೀಕ್ಷಕ ಕೆ.ಜಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಸಿ.ಪೀರ್ ಅಹಮ್ಮದ್, ಸಹಾಯಕ ಜೈಲರ್ ಎಫ್.ಜಿ.ಬಾರಿಕೇರ, ಬಿ.ತಿಪ್ಪೇಶ್, ಸಿದ್ದೇಶ್ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT