ಹೊಸಪೇಟೆ (ವಿಜಯನಗರ): ಹಂಪಿಯ ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಎರಡು ದಿನಗಳ ನಂತರ ಪತ್ತೆಯಾಗಿದೆ.

ಹೈದರಾಬಾದ್ನ ಕಿರಣ್ (25) ತನ್ನ ಗೆಳೆಯರೊಂದಿಗೆ ಹುಲಿಗಿ ಜಾತ್ರೆ ಮುಗಿಸಿಕೊಂಡು ಬುಧವಾರ ಹಂಪಿಗೆ ಬಂದಿದ್ದರು. ತುಂಗಭದ್ರಾ ನದಿಯಲ್ಲಿ ಈಜಾಡುತ್ತಿದ್ದಾಗ ನಾಪತ್ತೆಯಾಗಿದ್ದರು.

ವಿಷಯ ತಿಳಿದು, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದರು. ಗುರುವಾರ ಮೃತ ದೇಹ ಪತ್ತೆಯಾಗಿದೆ. ನದಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮೃತದೇಹ ನೋಡಿದ ಗೆಳೆಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.