ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ನೇಮಕ

Published 28 ಜೂನ್ 2024, 10:02 IST
Last Updated 28 ಜೂನ್ 2024, 10:02 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ಸರ್ಕಾರ ಶುಕ್ರವಾರ ನೇಮಕ ಮಾಡಿದೆ.

ವಾಲ್ಮೀಕಿ ನಿಗಮದಲ್ಲಿನ ಹಗರಣ ಬಯಲಾದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಜೂನ್ 6 ರಂದು ಸಚಿವ ಸ್ಥಾನ ತೊರೆದಿದ್ದರು. ಅದರೊಂದಿಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನವೂ ತೆರವಾಗಿತ್ತು.

ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಸಚಿವ ಜಮೀರ್ ಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೊಸಪೇಟೆಯಲ್ಲಿ‌ ತಿಳಿಸಿದ್ದರು. ಅದರಂತೆ, ಜಮೀರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.

ಜಮೀರ್ ನೇಮಕ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT