ಬಳ್ಳಾರಿ: ಕೇಂದ್ರದ ಯುಪಿಎ ಸರ್ಕಾರ ಭ್ರಷ್ಟಚಾರ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕವು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಸ್ಥಳೀಯ ಕನಕ ದುರ್ಗಮ್ಮ ದೇವಸ್ಥಾನ ಎದುರು ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹರಿಣಿ ರಾಯಸಂ, 2ಜಿ ಸ್ಪೆಕ್ಟ್ರಂಆದರ್ಶ ಆಪಾರ್ಟ್ಮೆಂಟ್, ಕಾಮನ್ವೆಲ್ತ್ ಕ್ರೀಡಾಕೂಟ ಸೇರಿ ಅನೇಕ ಹಗರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರ ದೇಶದ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ದೂರಿದರು.ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನು ವಾಪಸ್ಸು ತರಿಸಲು ಸೂಕ್ತ ಕ್ರಮ ಜರುಗಿಸಬೇಕು. ಅಲ್ಲದೆ, ಬ್ಯಾಂಕಿನಲ್ಲಿ ಖಾತೆ ಹೊಂದಿದವರ ಪಟ್ಟಿಯನ್ನು ಕೂಡಲೇ ಬಹಿರಂಗ ಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಹಲವು ಹಗರಣಗಳಲ್ಲಿ ಸಿಲುಕಿಕೊಂಡ ಭ್ರಷ್ಟರನ್ನು ಕೂಡಲೇ ಬಂಧಿಸಿ ವಿಚಾರಣೆಗೊಳಪಡಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ರೂ. 500 ಮತ್ತು 1000 ನೋಟುಗಳ ಚಲಾವಣೆ ರದ್ದುಪಡಿಸಬೇಕು. ಭ್ರಷ್ಟಚಾರ ಮುಕ್ತ ಚುನಾವಣೆ ನಡೆಸಲು ಚುನಾವಣೆ ವ್ಯವಸ್ಥೆಯಲ್ಲಿ ಪರಿವರ್ತನೆ ತರಬೇಕು ಎಂದರು.
ಎಬಿವಿಪಿ ನಗರ ಘಟಕದ ಕಾರ್ಯದರ್ಶಿ ಜನಾರ್ದನ ಗೌಡ, ಸಂಘಟನಾ ಕಾರ್ಯದರ್ಶಿ ಶಿವಾನಂದ ಬಿರಾದಾರ, ಜಿಲ್ಲಾ ಘಟಕದ ಸಂಚಾಲಕ ಬಿ.ನಾಗೇಂದ್ರ, ಶಾಂತಕುಮಾರ, ಗಂಗಾಧರ, ಶಿವಪ್ಪ, ತಿಪ್ಪೇಸ್ವಾಮಿ, ಶ್ರೀನಿವಾಸ, ಮಲ್ಲಯ್ಯ ಮತ್ತಿತರೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.