ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶದ ಪ್ರಗತಿಗೆ ಒಗ್ಗಟ್ಟಿನ ಯತ್ನ ಅಗತ್ಯ’

Last Updated 28 ಜನವರಿ 2017, 10:45 IST
ಅಕ್ಷರ ಗಾತ್ರ

ಸಂಡೂರು: ದೇಶದ ಜನತೆ ವೈಚಾರಿಕ ಮನೋಭಾವನೆ ಬೆಳೆಸಿಕೊಂಡು ದೇಶ ವನ್ನು ಪ್ರಗತಿಪಥದಲ್ಲಿ ಕೊಂಡೊಯ್ಯಲು ಒಟ್ಟಾಗಿ ಶ್ರಮಿಸಬೇಕಿದೆ ಎಂದು ತಹಶೀ ಲ್ದಾರ್ ಯು. ನಾಗರಾಜ ಹೇಳಿದರು.

ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರದ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಈ. ತುಕಾರಾಂ, ಬರ ಎದುರಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.

ರೈತ ಸಂಘದಿಂದ ಸರ್ಕಾರಿ ನೌಕರ ರಾದ ಕೆ.ಬಿ. ತಿಮ್ಮಪ್ಪ, ವೆಂಕಟೇಶ್ ಅವ ರನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಿಂದ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹ ಧನದ ಚೆಕ್‌ಗಳನ್ನು ವಿತರಿಸಲಾಯಿತು. ಮಕ್ಕಳು ವಿವಿಧ ಸ್ವಾತಂತ್ರ್ಯ ಹೋರಾಟ ಗಾರರ ಹಾಗೂ ಪುರಾಣ, ಇತಿಹಾಸ ಪ್ರಸಿದ್ಧ ವ್ಯಕ್ತಿಗಳ ವೇಷದಲ್ಲಿ ಕಾಣಿಸಿ ಕೊಂಡು ಗಮನಸೆಳೆದರು.

ಜಿ.ಪಂ. ಸದಸ್ಯ ಆರ್.ಎಚ್. ಹರ್ಷಾ, ಪುರಸಭೆ ಅಧ್ಯಕ್ಷ ಗಡಂಬ್ಲಿ ಚೆನ್ನಪ್ಪ, ಉಪಾಧ್ಯಕ್ಷ ಕೆ.ವಿ. ಸುರೇಶ್,  ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಡಿ. ಫರ್ಜಾನಾ ಗೌಸ್ ಅಜಂ, ಉಪಾಧ್ಯಕ್ಷೆ ಗಂಗಾಬಾಯಿ ಚಂದ್ರ ನಾಯ್ಕ, ಜನಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT