ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ದೈಹಿಕ-ಮಾನಸಿಕ ಸ್ವಾಸ್ಥ್ಯಕ್ಕೆ ಕ್ರೀಡೆ'

Last Updated 27 ಡಿಸೆಂಬರ್ 2012, 8:56 IST
ಅಕ್ಷರ ಗಾತ್ರ

ಬಳ್ಳಾರಿ: ಸಾರ್ವಜನಿಕರ ಸುರಕ್ಷಾ ಕಾರ್ಯ ಹಾಗೂ ಅಪರಾಧ ಪ್ರಕರಣಗಳ ಜಂಜಡದಿಂದಾಗಿ ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರ ಮಾನಸಿಕ ಸ್ಥಿರತೆ ಕಾಪಾಡಲು ಕ್ರೀಡೆ ಅತ್ಯಂತ ಸಹಕಾರಿಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಮಣಿಕಂಠನ್ ಅಭಿಪ್ರಾಯಪಟ್ಟರು.
ನಗರದಲ್ಲಿ ಬುಧವಾರ ಆರಂಭವಾದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪೊಲೀಸ್  ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ನೆರವಾಗುತ್ತದೆ. ಸಾರ್ವಜನಿಕರ ರಕ್ಷಣೆಗಾಗಿ ಸೇವೆ ಸಲ್ಲಿಸುವ ಪೊಲೀಸರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಅವರು ಹೇಳಿದರು.

ಕ್ರೀಡೆಯ ಸೋಲು- ಗೆಲುವು ಮುಖ್ಯವಲ್ಲ. ಬದಲಿಗೆ ಪ್ರತಿಯೊಬ್ಬರೂ ಅದರಲ್ಲಿ ಭಾಗವಹಿಸುವುದು ಮುಖ್ಯ. ಸೋಲೇ ಗೆಲುವಿನ ಸೋಪಾನ ಎಂಬುದನ್ನು ಮರೆಯದೆ, ಪ್ರತಿಯೊಬ್ಬರೂ ಕ್ರೀಡಾ ಸ್ಫೂರ್ತಿ ಅಳವಡಿಸಿಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿತ್ಯ ಕ್ರೀಡೆಯಲ್ಲಿ ತೊಡಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ಸಲಹೆ ನೀಡಿದರು.

ಕಳೆದ ಬಾರಿ ನಡೆದ ವಾರ್ಷಿಕ ಕೀಡಾಕೂಟದಲ್ಲಿ ಸಮಗ್ರ ವೀರಾಗ್ರಣಿಯಾಗಿ ಹೊರಹೊಮ್ಮಿದ ಮೇಟಿ ಹೇಮಚಂದ್ರ ಅವರು ಕ್ರೀಡಾಜ್ಯೋತಿ ಹೊತ್ತುತಂದರು. ಜಿಲ್ಲೆಯ ವಿವಿಧ ತಾಲ್ಲೂಕುಗಳ ಒಟ್ಟು 8 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದು, ಡಿಎಆರ್‌ನ ಸಿಪಿಐ ಪ್ರಕಾಶ್ ಕ್ರೀಡಾ ಪ್ರಮಾಣ ಬೋಧಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಶೇಖರ ಕೊಡಬಾಗಿ, ಡಿವೈಎಸ್‌ಪಿ ಮುರುಗಣ್ಣನವರ್, ರುದ್ರಮುನಿ, ನಿವೃತ್ತ ದೈಹಿಕ ಶಿಕ್ಷಕ ಸುಬ್ಬಣ್ಣ ಮತ್ತಿತರರು  ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT