ಕುರುಗೋಡು: ಕ್ಷೇತ್ರದಲ್ಲಿನ ಮೂಲ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಅನುದಾನ ನೀಡುವಂತೆ ಅನೇಕ ಬಾರಿ ಮನವಿ ಮಾಡಿದರೂ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಶಾಸಕ ಟಿ.ಎಚ್. ಸುರೇಶ್ ಬಾಬು ಆರೋಪಿಸಿದರು.

ಪಟ್ಟಣದಲ್ಲಿ ಮಂಗಳವಾರ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಕೋಳೂರು ಕ್ರಾಸ್ ನಿಂದ ಕುರುಗೋಡು ಪಟ್ಟಣದ ವರೆಗಿನ ಡಾಂಬರ್ ರಸ್ತೆಗೆ ಈ ವರೆಗೆ ಕೇವಲ 2.5 ಕೋಟಿ ಬಿಡುಗಡೆ ಮಾಡಿದ್ದಾರೆ. ಉಳಿದ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಲ್ಲಿ ಕೋರಿದರೂ ಪ್ರಯೋಜನವಾಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸದ ಜಿಲ್ಲಾಡಳಿತದ ವಿರುದ್ಧ ಮುಂದಿನ ದಿನಗಳಲ್ಲಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.

ಕೊಳಗಲ್ಲು, ಯರಂಗಳಿಗಿ ಮಾರ್ಗವಾಗಿ ಕುರುಗೋಡು ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು 4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದರು.

ಪಟ್ಟಣದಲ್ಲಿ 1.21 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಸುತ್ತುಗೋಡೆ, ಹೆಚ್ಚುವರಿ ಕೊಠಡಿ, ರಂಗಮಂದಿರ ನಿರ್ಮಿಸಿಕೊಡುವ ಮೂಲಕ ಜಿಲ್ಲೆಗೆ ಮಾದರಿ ಕಾಲೇಜು ಆಗಿ ಮಾಡುವ ಭರವಸೆ ನೀಡಿದರು.

ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೋನಾಳು ರಾಜಶೇಖರಗೌಡ, ಪ್ರಾಚಾರ್ಯ ಜಿ.ಎಸ್. ವೆಂಕಟೇಶಲು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಶಾಸಕ ಟಿ.ಎಚ್.ಸುರೇಶ್ ಬಾಬು, ಪಟ್ಟಣದ ಪರಿಶಿಷ್ಟರ ಕಾಲೊನಿಯಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡುವ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ ಮತ್ತು ಸಿದ್ದಮ್ಮನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಚ್ಚುವರಿ ಕಟ್ಟಡವನ್ನು ಉದ್ಘಾಟಿಸಿದರು.

ಹಾಲುಒಕ್ಕೂಟದ ಮಾಜಿ ಅಧ್ಯಕ್ಷ ಯರಂಗಳಿಗಿ ತಿಮ್ಮಾರೆಡ್ಡಿ, ಮಾಜಿ ಜಿ.ಪಂ. ಅಧ್ಯಕ್ಷ ಎನ್.ರುದ್ರಗೌಡ, ಜಿ.ಪಂ. ಸದಸ್ಯರಾದ ಎನ್.ಎಂ. ಗಾಯಿತ್ರಮ್ಮ, ವಿ.ಎರ್ರಿಸ್ವಾಮಿ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಹನುಮಂತಪ್ಪ, ಸದಸ್ಯ ನಾರಾಯಣರೆಡ್ಡಿ, ಗ್ರಾ.ಪಂ. ಉಪಾಧ್ಯಕ್ಷೆ ಸುವರ್ಣಮ್ಮ ಉಪಸ್ಥಿತರಿದ್ದರು.

ಪ್ರಥಮ ಬಿ.ಎ. ವಿಭಾಗದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ದೀಪಿಕಾ ರೆಡ್ಡಿವನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಉಪನ್ಯಾಸಕರಾದ ಮುತ್ತೇಗೌಡ ನಿರೂಪಿಸಿದರು. ನಂಜುಂಡಪ್ಪ ಸ್ವಾಗತಿಸಿದರು. ಗುರುಬಸಪ್ಪ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.