ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸ್ವಯಂಪ್ರೇರಿತ ಬಂದ್‌ಗೆ ಬೆಂಬಲ

Last Updated 29 ಜನವರಿ 2020, 11:28 IST
ಅಕ್ಷರ ಗಾತ್ರ

ವಿಜಯಪುರ: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ರದ್ದತಿಗೆ ಒತ್ತಾಯಿಸಿ ಬಹುಜನ ಕ್ರಾಂತಿ ಮೋರ್ಚಾ ಬುಧವಾರ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್‌ ಬೆಂಬಲಿಸಿ ನಗರದಲ್ಲಿ ಕೆಲ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು.

ಇಲ್ಲಿಯ ಬಾಗಲಕೋಟೆ ರಸ್ತೆ, ಬಡಿಕಮಾನ್, ಬಸ್ ನಿಲ್ದಾಣ, ನೆಹರೂ ಮಾರುಕಟ್ಟೆ ಸೇರಿದಂತೆ ಹಲವೆಡೆ ಬೆಳಿಗ್ಗೆಯಿಂದಲೇ ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು.

‘ಬಾಗಲಕೋಟೆ ರಸ್ತೆಯಲ್ಲಿ ಆಟೊ ತಡೆಯಲು ಮುಂದಾದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದರು’ ಎಂದು ತಿಳಿದು ಬಂದಿದೆ.

ಇನ್ನುಳಿದಂತೆ ವಾಹನ ಸಂಚಾರ ಎಂದಿನಂತೆ ಇತ್ತು. ನೆಹರೂ ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣಿನ ವ್ಯಾಪಾರ ಭಾಗಶಃ ಬಂದ್ ಆಗಿತ್ತು. ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಿದವು. ಆಟೊ ಸಂಚಾರವೂ ಎಂದಿನಂತೆ ಇತ್ತು.

ಮುಂಜಾಗ್ರತಾ ಕ್ರಮವಾಗಿ ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿದ್ದವು. ಪ್ರಮುಖ ವೃತ್ತ, ಬಡಾವಣೆ ಹಾಗೂ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT