ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಕಾನ್‌ನ ಮಧು ಪಂಡಿತ್‌ ದಾಸ್‌ ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌

Last Updated 27 ಏಪ್ರಿಲ್ 2022, 18:02 IST
ಅಕ್ಷರ ಗಾತ್ರ

ಬೆಂಗಳೂರು: ಇಸ್ಕಾನ್‌ನ ‘ಅಕ್ಷಯ ಪಾತ್ರ’ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಮಧು ಪಂಡಿತ್‌ ದಾಸ್‌, ಸಾಮಾಜಿಕ ಅಸಮಾನತೆ ತೊಡೆದು ಹಾಕಲು ವಿಶಿಷ್ಟ ವಿಧಾನಗಳನ್ನು ಬಳಸಿ ಯಶಸ್ವಿಯಾದ ಸಮಾಜ ಸೇವಕ ಎಂ.ಎಸ್‌. ಮುತ್ತುರಾಜ್‌,ದೃಶ್ಯಕಲೆ ಕ್ಷೇತ್ರಕ್ಕೆ ಪ್ರಮುಖ ಕೊಡುಗೆ ನೀಡಿದ ಕಲಾವಿದ ಎಸ್.ಜಿ.ವಾಸುದೇವ್‌ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಗೆ ಆಯ್ಕೆ ಮಾಡಲಾಗಿದೆ.

‘ಇದೇ 29ರಂದುಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ 56ನೇ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ತಿಳಿಸಿದ್ದಾರೆ.

ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್‌.ಸಿ. ಶರ್ಮ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

‘ಘಟಿಕೋತ್ಸವದಲ್ಲಿ ಒಟ್ಟು 321 ಚಿನ್ನದ ಪದಕ ಹಾಗೂ 132 ನಗದು ಬಹುಮಾನ ವಿತರಿಸಲಾಗುವುದು. 127 ಅಭ್ಯರ್ಥಿಗಳಿಗೆ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುವುದು. ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಎಚ್‌.ಡಿ ಸೇರಿ ಒಟ್ಟು 68,211 ಮಂದಿ ಪದವಿ ಪ್ರಮಾಣಪತ್ರ ಪಡೆಯಲು ಅರ್ಹರಾಗಿದ್ದಾರೆ. ಘಟಿಕೋತ್ಸವದಲ್ಲಿ ಭಾಗವಹಿಸದೇ ಇರುವವರು ನ್ಯಾಡ್‌ (ನ್ಯಾಷನಲ್‌ ಅಕಾಡೆಮಿಕ್‌ ಡೈರೆಕ್ಟರಿ) ಪೋರ್ಟಲ್‌ನಲ್ಲಿ ಡಿಜಿ ಲಾಕರ್‌ನಿಂದ ಆ ದಿನದಂದೇ ಪದವಿ ಪ್ರಮಾಣಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT