ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಚಪ್ಪಲಿಯೊಳಗೆ ಒಂದು ಕೆ.ಜಿ ಚಿನ್ನ! ಪ್ರಯಾಣಿಕನ ಬಂಧನ

Last Updated 16 ಮಾರ್ಚ್ 2023, 4:40 IST
ಅಕ್ಷರ ಗಾತ್ರ

ದೇವನಹಳ್ಳಿ: ಚಪ್ಪಲಿಯ ಒಳಭಾಗದಲ್ಲಿ ಒಂದು ಕೆ.ಜಿ. ಚಿನ್ನದ ಬಿಸ್ಕತ್‌ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಆರೋಪಿಯನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಬಂಧಿತನಿಂದ 1 ಕೆ.ಜಿ. 205 ಗ್ರಾಂ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರ ಮೌಲ್ಯ ₹69.40 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರಯಾಣಿಕನ ಅಪರಾಧ ಹಿನ್ನೆಲೆ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಕಸ್ಟಮ್ಸ್‌ ಅಧಿಕಾರಿಗಳು ತೀವ್ರ ತಪಾಸಣೆ ಮಾಡಿದಾಗ ಆತನ ಚಪ್ಪಲಿಯ ತಳಭಾಗದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಯು ಸುಲಭವಾಗಿ ಅಧಿಕಾರಿಗಳ ಕಣ್ತಪ್ಪಿಸುವ ಉದ್ದೇಶದಿಂದ ಚಿನ್ನವನ್ನು ಸಣ್ಣ ಸಣ್ಣ ತುಂಡುಗಳನ್ನು ಮಾಡಿ ಚಪ್ಪಲಿಯಲ್ಲಿ ಇರಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT