ಶನಿವಾರ, ಮಾರ್ಚ್ 25, 2023
25 °C

24 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 24 ಶಿಕ್ಷಕರಿಗೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ಬಡ್ತಿ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾ ಮಾರೇಗೌಡ ತಿಳಿಸಿದ್ದಾರೆ .

ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಬಡ್ತಿ ಪಡೆದ ಶಿಕ್ಷಕರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಕನ್ನಡ  4, ಇಂಗ್ಲಿಷ್  4, ವಿಜ್ಞಾನ 3, ಕಲಾ ವಿಭಾಗದಲ್ಲಿ 11, ದೈಹಿಕ ಶಿಕ್ಷಣ ವಿಷಯದ 2 ಶಿಕ್ಷಕರು ಬಡ್ತಿ ಪಡೆದಿದ್ದಾರೆ. ಸೇವಾ ಜೇಷ್ಠತೆ ಅಧಾರದ ಮೇಲೆ ಬಡ್ತಿ ನೀಡಲಾಗಿದೆ. ಬಡ್ತಿಗಾಗಿ ಶಿಕ್ಷಕ ಸಂಘ ಮನವಿ ಸಲ್ಲಿಸಿತ್ತು ಎಂದು ಮಾಹಿತಿ ನೀಡಿದರು. 

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಕೆ.ಕಾಂತರಾಜು, ತಾಲ್ಲೂಕು ಅಧ್ಯಕ್ಷರಾದ ಬಿ.ಎಸ್.ಸಿರದ ಗಂಗಯ್ಯ, ಎಚ್.ಎನ್.ನಾಗೇಶ್, ಎಸ್.ಎಂ.ಮುನಿರಾಜು, ಪರಮೇಶ್ವರಯ್ಯ ಹಾಗೂ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ರೆಡ್ಡಿ, ಜೆ.ಕೆ.ಜಯಕುಮಾರ್  ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು