ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

ಆನೇಕಲ್: 470 ಮತಗಟ್ಟೆ ಸಿಬ್ಬಂದಿ ನಿಯೋಜನೆ
Last Updated 26 ಡಿಸೆಂಬರ್ 2021, 19:48 IST
ಅಕ್ಷರ ಗಾತ್ರ

ಆನೇಕಲ್:ತಾಲ್ಲೂಕಿನ ಹೆಬ್ಬಗೋಡಿ ನಗರಸಭೆ, ಚಂದಾಪುರ ಮತ್ತು ಜಿಗಣಿ ಪುರಸಭೆಗೆ ಸೋಮವಾರ ಮತದಾನ ನಡೆಯಲಿದ್ದು, ಚುನಾವಣೆ ಸುಗಮವಾಗಿ ನಡೆಯಲು ತಾಲ್ಲೂಕು ಆಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ತಹಶೀಲ್ದಾರ್‌ ಪಿ. ದಿನೇಶ್‌ ತಿಳಿಸಿದ್ದಾರೆ.

ಹೆಬ್ಬಗೋಡಿ ನಗರಸಭೆಯ 31 ವಾರ್ಡ್‌ಗಳ ಪೈಕಿ 5 ವಾರ್ಡ್‌ಗಳಲ್ಲಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 26 ವಾರ್ಡ್‌ಗಳಿಗೆ ಚುನಾವಣೆ ನಿಗದಿಯಾಗಿದೆ. 44 ಮತಗಟ್ಟೆ ಸ್ಥಾಪಿಸಲಾಗಿದ್ದು, ಈ ಪೈಕಿ 10 ಸೂಕ್ಷ್ಮ ಮತ್ತು 7 ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ. 58 ಅಭ್ಯರ್ಥಿಗಳು ಕಣದಲ್ಲಿದ್ದು, 59,205 ಮತದಾರರಿದ್ದಾರೆ.

ಚಂದಾಪುರ ಪುರಸಭೆಯಲ್ಲಿ 23 ವಾರ್ಡ್‌ಗಳಿಗೆ ಚುನಾವಣೆ ನಿಗದಿಯಾಗಿದ್ದು, 56 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 27,062 ಮತದಾರರಿದ್ದಾರೆ. 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 5 ಸೂಕ್ಷ್ಮ ಮತ್ತು 1 ಅತಿಸೂಕ್ಷ್ಮ ಮತಗಟ್ಟೆಯಾಗಿದೆ.

ಜಿಗಣಿ ಪುರಸಭೆಯಲ್ಲಿ 23 ವಾರ್ಡ್‌ಗಳಿಗೆ ಚುನಾವಣೆ ನಿಗದಿಯಾಗಿದ್ದು, 61 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 18 ಸೂಕ್ಷ್ಮ ಮತ್ತು 5 ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ. ಒಟ್ಟು 16,496 ಮತದಾರರು ಇದ್ದಾರೆ.

ಒಂದು ನಗರಸಭೆ ಮತ್ತು ಎರಡು ಪುರಸಭೆಗಳ ಚುನಾವಣೆಗಾಗಿ 470 ಮತಗಟ್ಟೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 94 ಮಂದಿ ಪೊಲೀಸ್‌ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ.

ಆನೇಕಲ್‌ ಉಪ ವಿಭಾಗದ ಡಿವೈಎಸ್‌ಪಿ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ಕೋವಿಡ್‌ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ಪ್ರತಿ ಮತಗಟ್ಟೆಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸ
ಲಾಗಿದೆ. ಸ್ಯಾನಿಟೈಜ್‌ ಮತ್ತು ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುವುದು. ಅವಶ್ಯಕತೆ ಇದ್ದರೆ ಕೊರೊನಾ ಪರೀಕ್ಷೆಗೂ ವ್ಯವಸ್ಥೆ ಮಾಡಲಾಗಿದೆ. ಅಂತರ ಕಾಯ್ದುಕೊಂಡು ಚುನಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT