ಶುಕ್ರವಾರ, ಅಕ್ಟೋಬರ್ 22, 2021
29 °C
ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆ

ವಿಜಯಪುರ: ಬಾಲೇಪುರ ಡೇರಿಗೆ ₹ 3.76 ಲಕ್ಷ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ₹ 3.76 ಲಕ್ಷ ನಿವ್ವಳ ಲಾಭ ಬಂದಿದೆ. ರೈತರಿಗೆ ಶೇ 2.59ರಷ್ಟು ಬೋನಸ್ ನೀಡಲಾಗುತ್ತದೆ ಎಂದು ಡೇರಿ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘವು ಎಲ್ಲರ ಸಹಕಾರದಿಂದ ಉತ್ತಮವಾಗಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಭಾಂಗಣ ನಿರ್ಮಾಣ ಮಾಡಲಾಗುವುದು. ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಹಾಲು ಉತ್ಪಾದಕರ ಸಹಕಾರ ಹಾಗೂ ಸಿಬ್ಬಂದಿ ಬದ್ಧತೆಯಿಂದ ಸಂಘ ಅಭಿವೃದ್ಧಿಯಾಗಲಿದೆ ಎಂದರು.

ಬೆಂಗಳೂರು ಪೂರ್ವ ಶಿಬಿರ ಕಚೇರಿಯ ವಿಸ್ತರಣಾಧಿಕಾರಿ ಕೆ.ಎಸ್. ಹನುಮಂತಪ್ಪ ಮಾತನಾಡಿ, ಕೋವಿಡ್‌ನಿಂದ ಹಾಲು ಮಾರಾಟ ಕಡಿಮೆಯಾಗಿದ್ದು, ಇದಕ್ಕಾಗಿ ರೈತರಿಂದ ಖರೀದಿ ಮಾಡುವ ಹಾಲಿಗೆ ₹ 1.50 ಬೆಲೆ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.

ದಿನಕ್ಕೆ ಸುಮಾರು 17 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದ್ದು, 10 ಲಕ್ಷ ಲೀಟರ್ ಮಾತ್ರ ಮಾರಾಟವಾಗುತ್ತಿದೆ. 7 ಲಕ್ಷ ಲೀಟರ್ ಉಳಿಯುತ್ತಿದ್ದು, ಇದರಿಂದ ಹಾಲಿನ ಪುಡಿ ಹಾಗೂ ಇತರೆ ಆಹಾರ ಪದಾರ್ಥಗಳು ತಯಾರಾಗುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಳವಾಗಲಿದೆ ಎಂದು ಹೇಳಿದರು.

ಕೃಷಿ ಅಧಿಕಾರಿ ಶ್ವೇತಾ ಮಾತನಾಡಿ, ರಾಸುಗಳಿಗೆ ಸರಿಯಾದ ಪ್ರಮಾಣದಲ್ಲಿ ಪಶು ಆಹಾರ ನೀಡಬೇಕು. ಮಳೆಗಾಲದಲ್ಲಿ ಹಸಿ ಮೇವು, ಒಣ ಮೇವು ನೀಡಿದರೆ ಗುಣಮಟ್ಟದ ಹಾಲನ್ನು ಪಡೆಯಬಹುದು ಎಂಂದು ಸಲಹೆ ನೀಡಿದರು.

ಬಮೂಲ್ ಮೂಲಕ ಸಬ್ಸಿಡಿ ದರದಲ್ಲಿ ಮೇವು ಕತ್ತರಿಸುವ ಯಂತ್ರ ನೀಡಲಾಗುತ್ತದೆ. ಆಸಕ್ತ ರೈತರು ಯಂತ್ರ ಖರೀದಿಸಬಹುದು ಎಂದರು.

ನಿರ್ದೇಶಕರಾದ ರಾಮಾಂಜಿನಪ್ಪ, ಎನ್. ನಂಜಪ್ಪ, ಕೆಂಪಣ್ಣ, ಬಿ. ವೆಂಕಟರಾಮಯ್ಯ, ಕೃಷ್ಣಪ್ಪ, ಮುನಿರಾಜಪ್ಪ, ರಾಮಕೃಷ್ಣಪ್ಪ, ವನಜಾಕ್ಷಮ್ಮ, ಮುನಿಯಪ್ಪ, ರಾಜಪ್ಪ, ಮಂಜುನಾಥ್, ಕಾರ್ಯದರ್ಶಿ ಕೆಂಪರಾಜು, ಹಾಲು ಪರೀಕ್ಷಕ ಮುನಿಕಾಂತಪ್ಪ, ಸಹಾಯಕ ಆಂಜಿನಪ್ಪ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.