ಶುಕ್ರವಾರ, ಸೆಪ್ಟೆಂಬರ್ 24, 2021
23 °C

409 ವಿದ್ಯಾರ್ಥಿಗಳು ನೀಟ್‌ಗೆ ಹಾಜರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಆಲೂರುದುದ್ದನಹಳ್ಳಿ ಬಳಿ ಇರುವ ಶ್ರೀಮಾರುತಿ ವಿದ್ಯಾಮಂದಿರ ಶಾಲೆಯಲ್ಲಿ 2019ನೇ ಸಾಲಿನ ನೀಟ್‌ ನಡೆಯಿತು. 480 ಪೈಕಿ, 409 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ ಎಂದು ನೀಟ್ ಮುಖ್ಯ ಪರೀವಿಕ್ಷಕ ಸಂತೋಷ್ ಹೇಳಿದರು.

ಉಳಿದ 71 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷೆ ಸುಗಮವಾಗಿ ನಡೆಯಿತು. ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮ ಆಸನ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಭವನದಿಂದ ನೇರವಾಗಿ ಶಾಲಾವರಣಕ್ಕೆ ಕರೆದೊಯ್ಯಲು ವಾಹನ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳೊಂದಿಗೆ ಬರುವ ಪೋಷಕರಿಗೆ ವಿಶ್ರಾಂತಿಗಾಗಿ ಸೂಕ್ತ ಜಾಗದ ವ್ಯವಸ್ಥೆ ಕಲ್ಪಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು