ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಕಾಂಕ್‌ನಿಂದ ಅಕ್ರಮವಾಗಿ ತರಲಾಗಿದ್ದ 60 ಜೀವಂತ ನಕ್ಷತ್ರ ಆಮೆಗಳನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚೆಕ್ ಇನ್ ವಿಭಾಗದಲ್ಲಿ ಲಗೇಜ್ ಬ್ಯಾಗ್‌ಗಳನ್ನು ಪರಿಶೀಲನೆ ಮಾಡುತ್ತಿದ್ದ ವೇಳೆ ಆಮೆಗಳಿದ್ದ ಬ್ಯಾಗ್ ಪತ್ತೆಯಾಗಿದೆ.

ಕೂಡಲೇ ಅವುಗಳನ್ನು ರಕ್ಷಣೆ ಮಾಡಿದ ಕಸ್ಟಮ್ಸ್ ತಂಡವು ರಾಜ್ಯ ಅರಣ್ಯ ಇಲಾಖೆಗೆ ಹಸ್ತಾಂತರಿಸಿದೆ. ವನ್ಯಜೀವಿ ಅಪರಾಧ ನಿಯಂತ್ರಣಾ ಘಟಕದ ದಕ್ಷಿಣ ವಿಭಾಗದ ಅಧಿಕಾರಿಗಳ ಸಹಯೋಗದಡಿ ಆಮೆಗಳನ್ನು ಆರೈಕೆ ಮಾಡಲಾಗುತ್ತಿದೆ.

ವೈಮಾನಿಕ ಗುಪ್ತಚರ ದಳ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.