ಶನಿವಾರ, ಸೆಪ್ಟೆಂಬರ್ 18, 2021
29 °C

ದೊಡ್ಡಬಳ್ಳಾಪುರ: 7 ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿದ ವಿದ್ಯಾರ್ಥಿನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರದ ಆರ್.ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಜವೇರಿಯಾ ಫಾತಿಮಾ ಏಳು ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಏಕಕಾಲಕ್ಕೆ ಉದ್ಯೋಗಾವಕಾಶ ಗಿಟ್ಟಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ವಿಜಯ ನಗರದವರಾದ ಈಕೆ ಮೈಕ್ರೋಸಾಫ್ಟ್ ಕಂಪನಿಯಲ್ಲಿ ವಿದ್ಯಾರ್ಥಿ ಉದ್ಯೋಗ ರಾಯಭಾರಿಯಾಗಿಯೂ ಆಯ್ಕೆಯಾಗಿದ್ದಾರೆ. ಅಲ್ಲದೇ ಐಬಿಎಂ, ಆಕ್ಸೆಂಚರ್, ಮೈಂತ್ರಾ, ಎಚ್‍ಸಿಎಲ್, ಟಿಸಿಎಸ್, ನೋವ್‍ಬ್ರೋ ಕಂಪನಿಗಳು ಈ ಪ್ರತಿಭಾವಂತೆಗೆ ಉದ್ಯೋಗಾವಕಾಶ ನೀಡಿವೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮುಗಿಸಿರುವ ಇವರು ಸೂಕ್ತ ಕಂಪನಿಯನ್ನು ಆಯ್ಕೆ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.