ಭಾನುವಾರ, ಜುಲೈ 25, 2021
22 °C

ಜಡಿಗೇನಹಳ್ಳಿ: ಮೊರಾರ್ಜಿ ದೇಸಾಯಿ ಕಾಲೇಜಿಗೆ ಶೇ 94.28 ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೂಲಿಬೆಲೆ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಶೇ 94.28 ಫಲಿತಾಂಶ ಪಡೆದುಕೊಂಡಿದೆ ಎಂದು ಪ್ರಾಂಶುಪಾಲ ಕಿರಣ್ ಕುಮಾರ್‌ ತಿಳಿಸಿದ್ದಾರೆ. 

  ಸರ್ಕಾರಿ ಕಾಲೇಜುಗಳು ಖಾಸಗಿ ಕಾಲೇಜುಗಳಿಗಿಂತ ಕಡಿಮೆಯಿಲ್ಲ ಎನ್ನುವುದನ್ನು ನಮ್ಮ ಸರ್ಕಾರಿ ವಸತಿ ಕಾಲೇಜಿನ ವಿದ್ಯಾರ್ಥಿಗಳ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಣಿತದಲ್ಲಿ 4, ಭೌತವಿಜ್ಞಾನ ಒಬ್ಬ ವಿದ್ಯಾರ್ಥಿ  100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಸೌಜನ್ಯ.ಕೆ.ಸಿ (ಶೇ 95.5) ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭಾಗ್ಯಮ್ಮ.ಬಿ (ಶೇ 94.8) ಹಾಗೂ ತುಳಸಿ (ಶೇ 91) ಅಂಕಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.