ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ,ಉಡುಗೊರೆಗಳ ಭರಾಟೆ

ದೇವನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ಎರಡನೇ ಹಂತದ ಚುನಾವಣೆಗೆ ಬಿಗಿ ಪೊಲೀಸ್‌ ಬಂದೋಬಸ್ತ್‌
Last Updated 27 ಡಿಸೆಂಬರ್ 2020, 2:06 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ದೇವನಹಳ್ಳಿ: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ 27ರಂದು (ಭಾನುವಾರ) ನಡೆಯಲಿದೆ. ತಾಲ್ಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ‍ವ್ಯವಸ್ಥೆ ಮಾಡಲಾಗಿದೆ ಎಂದು ತಾಲ್ಲೂಕು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಅನಿಲ್ ಕುಮಾರ್ ಹೇಳಿದರು.

ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಚುನಾವಣೆ ಪೂರ್ವಭಾವಿ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, 68 ಕಾಯ್ದಿರಿಸಿದ ಸಿಬ್ಬಂದಿ, 815 ಮತಗಟ್ಟೆ ಸಿಬ್ಬಂದಿ ನಿಯೋಜಿಸಿ ಈಗಾಗಲೇ ಚುನಾವಣೆ ಮತದಾನ ಪ್ರಕ್ರಿಯೆ ಬಗ್ಗೆ ತರಬೇತಿ ನೀಡಲಾಗಿದೆ. ಅನವಶ್ಯಕ ಗೊಂದಲ ಸೃಷ್ಟಿ ಮಾಡದೆ ಶಾಂತಿಯುತ ಚುನಾವಣೆ ನಡೆಸುವಂತೆ ತಹಶೀಲ್ದಾರ್ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ 170 ಮತಗಟ್ಟೆ ಪೈಕಿ 7 ಮತಗಟ್ಟೆಗಳಲ್ಲಿ ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆದಿದೆ. ಉಳಿದ 163 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನ ಕೇಂದ್ರದಿಂದ 100 ಮೀಟರ್ ಪ್ರದೇಶದ ಒಳಗೆ ಮತದಾರರು ಮತ್ತು ಮತಗಟ್ಟೆ ಅಧಿಕಾರಿಗಳನ್ನು ಹೊರತುಪಡಿಸಿ ಇತರರಿಗೆ ಅವಕಾಶವಿಲ್ಲ ಎಂದು ಹೇಳಿದರು.

ಮಹಿಳಾ ಮತದಾರರು 50,556, ಪುರುಷ ಮತದಾರಹಣರು 50,830 ಇತರೆ 5 ಮತಗಳು ಒಟ್ಟು 1,01,386 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 31 ಸೂಕ್ಷ್ಮ, 7ಅತಿ ಸೂಕ್ಷ್ಮ, 125 ಸಾಮಾನ್ಯ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಕೊರೊನಾ ಸೋಂಕಿತರಿಗೆ ಪಿಪಿಟಿ ಕಿಟ್ ಧರಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶವಿದೆ ಎಂದರು.

ಪ್ರತಿಯೊಂದು ಮತಗಟ್ಟೆಗೆ ಕೋವಿಡ್ ಕಿಟ್ ಒದಗಿಸಲಾಗಿದೆ. ಥರ್ಮಲ್ ಪರೀಕ್ಷೆ, ಸ್ಯಾನಿಟೈಸರ್, ಮಾಸ್ಕ್ ‍ವ್ಯವಸ್ಥೆ ಇರಲಿದೆ. ತುರ್ತು ಆರೋಗ್ಯ ಸೇವೆಗೆ ಅಂಬುಲೈನ್ಸ್ ಇರಲಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತ
ಗಟ್ಟೆಗಳಲ್ಲಿ 2 ರಿಂದ 3 ಪೊಲೀಸ್ ಸಿಬ್ಬಂದಿ, ಸಾಮಾನ್ಯ ಮತಗಟ್ಟೆಯಲ್ಲಿ ಒಬ್ಬರು ಪೊಲೀಸ್, ಮತ್ತೊಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಭದ್ರತೆಗೆ ನಿಯೋಜಿ
ಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT