ಆನೇಕಲ್ : ತಾಲ್ಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಸಕಲವಾರದಲ್ಲಿ ಶನಿವಾರ ಏಳು ವರ್ಷದ ತನ್ನ ಮಗನನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜಯಲಕ್ಷ್ಮೀ(33), ಇವರ ಪುತ್ರ ಹರಿಹರನ್(7) ಮೃತರು.
ಆಂಧ್ರಪ್ರದೇಶದ ಮೂಲದ ಇವರು ತಾಲ್ಲೂಕಿನ ಸಕಲವಾರ ಸಮೀಪದ ಸಿ.ಕೆ.ಪಾಳ್ಯದಲ್ಲಿ ವಾಸವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ವಿಜಯಲಕ್ಷ್ಮೀ ಅವರ ಪತಿ ಗಣೇಶ್ ಅಪಘಾತದಲ್ಲಿ ಮೃತಪಟ್ಟಿದ್ದರು.
ವಿಜಯಲಕ್ಷ್ಮಿ ಅವರ ಪತಿ ಮೊಬೈಲ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಎರಡು ವರ್ಷದ ಹಿಂದೆ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಘಟನೆ ಕುಟುಂಬಕ್ಕೆ ಅಘಾತ ತಂದಿತ್ತು. ಅಂದಿನಿಂದಲೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿಜಯಲಕ್ಷ್ಮೀ ಸಕಲವಾರದ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಖಿನ್ನತೆಗೆ ಒಳಗಾಗಿದ್ದ ವಿಜಯಲಕ್ಷ್ಮೀ ಕಳೆದ ಆರು ತಿಂಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಪತಿ ತೀರಿಕೊಂಡ ದಿನವೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.