ಮಂಗಳವಾರ, ಜನವರಿ 25, 2022
24 °C
ಆನೇಕಲ್ ತಾಲ್ಲೂಕು ಗಡಿ ಭಾಗದಲ್ಲಿ ತಪಾಸಣೆ ಚುರುಕು

ಆನೇಕಲ್ ತಾಲ್ಲೂಕು ಗಡಿ ಭಾಗದಲ್ಲಿ ತಪಾಸಣೆ: ಪ್ರತಿನಿತ್ಯ 3 ಸಾವಿರ ಕೋವಿಡ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ‘ಓಮೈಕ್ರಾನ್‌ ರೂಪಾಂತರ ತಳಿಯ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಗಿ ಕ್ರಮಕೈಗೊಂಡಿದ್ದು ಗಡಿ ಭಾಗದಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದರು.

ಆನೇಕಲ್‌ನ ಗಡಿಭಾಗವಾದ ಅತ್ತಿಬೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರಿಗೆ ಆರ್‌ಟಿಪಿಸಿಆರ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದ್ದು, ಪ್ರತಿದಿನ 3 ಸಾವಿರ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ತಾಲ್ಲೂಕಿನಲ್ಲಿ 130 ಕೊರೊನಾ ಸಕ್ರಿಯ ಪ್ರಕರಣಗಳಿವೆ. 72 ಮಂದಿಯನ್ನು ಹೋಮ್‌ ಐಸೋಲೇಷನ್‌ಗೆ ಒಳಪಡಿಸಲಾಗಿದೆ. 58 ಮಂದಿಯನ್ನು ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನಾದ್ಯಂತ ಲಸಿಕೆಗೆ ವೇಗ ನೀಡಲು ಕ್ರಮವಹಿಸಲಾಗಿದೆ. ಡಿ. 10ರೊಳಗೆ ತಾಲ್ಲೂಕಿನ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 2ನೇ ಡೋಸ್‌ ನೀಡಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಲಸಿಕೆ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಹೆಚ್ಚಿಸಿ ಪ್ರತಿಯೊಬ್ಬರು ಲಸಿಕೆ ಪಡೆಯಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು