ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ | ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ಮಹಿಳೆ ಸಾವು

Published 16 ಮೇ 2024, 15:33 IST
Last Updated 16 ಮೇ 2024, 15:33 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಕೋಲಾರದಿಂದ ಚಿಕ್ಕಬಳ್ಳಾಪುರದ ಕಡೆಗೆ ಗುರುವಾರ ಸಂಜೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ವಿಜಯಪುರಕ್ಕೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದ ಡಿ.ಶಾಹಿದಾಬಿ (47) ಮೃತರು.

ಆಂಧ್ರಪ್ರದೇಶದ ಪುಂಗನೂರಿನಿಂದ ಬಂದಿದ್ದ ಮಹಿಳೆ, ಕೋಲಾರದಿಂದ ಚಿಕ್ಕಬಳ್ಳಾಪುರಕ್ಕೆ ತನ್ನ ಸಂಬಂಧಿಕರ ಮನೆಗೆ ಹೋಗಲು ಪ್ರಯಾಣಿಸುತ್ತಿದ್ದರು.

ಬಸ್ ವಿಜಯಪುರಕ್ಕೆ ಬಂದಾಗ ಅಕ್ಕಪಕ್ಕ ಕುಳಿತಿದ್ದ ಪ್ರಯಾಣಿಕರು, ಇಳಿಯುವಂತೆ ತಿಳಿಸಲು ಮಾತನಾಡಿಸಿದರು. ಆಗ ಅವರಿಂದ ಪ್ರತಿಕ್ರಿಯೆ ಬರಲಿಲ್ಲ. ಆಗ ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಅದಕ್ಕೂ ಪ್ರತಿಕ್ರಿಯೆ ನೀಡದ ಕಾರಣ, ಸಾರಿಗೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಬಸ್ಸಿನ ನಿರ್ವಾಹಕ ಬಸ್‌ ಅನ್ನು ಪೊಲೀಸ್ ಠಾಣೆ ಮುಂದೆ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದರು.

ಮೃತ ಮಹಿಳೆಯ ಬಳಿಯಿದ್ದ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಸಾಯಿಬಾಬಾ ಆಸ್ಪತ್ರೆ, ಹಾಗೂ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ದಾಖಲೆಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. 

ಸ್ಥಳೀಯರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ, ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಿದರು.

ಡಿ. ಶಾಹಿದಾಬಿ 
ಡಿ. ಶಾಹಿದಾಬಿ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT