‘‍ಪಂಚಾಯಿತಿಯಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರ’

7
ಆಧಾರ್ ತಿದ್ದುಪಡಿ ಕೇಂದ್ರ ಆರಂಭಿಸಿರುವ ಮೊದಲ ರಾಜ್ಯ – ಸಚಿವ ಕೃಷ್ಣಬೈರೇಗೌಡ

‘‍ಪಂಚಾಯಿತಿಯಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರ’

Published:
Updated:
Deccan Herald

ದೊಡ್ಡಬಳ್ಳಾಪುರ: ಸಾರ್ವಜನಿಕರಿಗೆ ತ್ವರಿತವಾಗಿ ಸೇವೆ ಒದಗಿಸುವುದಕ್ಕಾಗಿ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಸ್ಥಾಪಿಸಿದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಬುಧವಾರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪ್ರಾರಂಭಿಸಿದ ‘ಆಧಾರ್ ತಿದ್ದುಪಡಿ ಕೇಂದ್ರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಆರಂಭಿಸಿರುವ ಮೊದಲ ರಾಜ್ಯ ನಮ್ಮದಾಗಿದೆ. ಗ್ರಾಮೀಣ ಜನರು ಆಧಾರ್ ತಿದ್ದುಪಡಿಗಾಗಿ ಸಾಕಷ್ಟು ದೂರ ಹೋಗಬಾರದು. ಹಾಗಾಗಿ, ಸಾರ್ವಜನಿಕರಿಗೆ ಕೈಗೆಟಕುವ ಅಂತರ ಹಾಗೂ ದರದಲ್ಲಿ ತಿದ್ದುಪಡಿ ಮಾಡಲು ಸಹಕಾರವಾಗುವಂತೆ ತಿದ್ದುಪಡಿ ಕೇಂದ್ರ ಸ್ಥಾಪಿಸಲಾಗಿದೆ’ ಎಂದರು.

ರಾಜ್ಯದ 6,022 ಗ್ರಾಮ ಪಂಚಾಯಿತಿಗಳಲ್ಲೂ ಆಧಾರ್ ತಿದ್ದುಪಡಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರ ಮನೆ ವಿಳಾಸ, ಮೊಬೈಲ್ ಸಂಖ್ಯೆ, ಪಿನ್‍ಕೋಡ್, ಹಾಗೂ ಇ-ಮೇಲ್ ಐಡಿಗಳನ್ನು ಆಧಾರ್‌ನಲ್ಲಿ ತಿದ್ದುಪಡಿ ಮಾಡಲಾಗುವುದು. ಸಾರ್ವಜನಿಕರು ಈ ಸೇವೆಯನ್ನು ಬಳಸಿಕೊಳ್ಳಲು 30 ನೀಡಬೇಕು ಎಂದರು. 

ಸಂಸತ್ ಸದಸ್ಯ ಎಂ. ವೀರಪ್ಪ ಮೊಯಿಲಿ, ಶಾಸಕ ಟಿ. ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಎಂ.ವಿ. ಸಾವಿತ್ರಿ, ಜಿಲ್ಲಾಧಿಕಾರಿ ಕರೀಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಲತಾ ಭಾಗವಹಿಸಿದ್ದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಶ್ರೀವತ್ಸ, ಉಪಾಧ್ಯಕ್ಷೆ ಮೀನಾಕ್ಷಿಕೆಂಪಣ್ಣ, ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾರಾಯಣಮ್ಮಗುಂಡಪ್ಪ, ಉಪಾಧ್ಯಕ್ಷೆ ಶಿಲ್ಪಮುನಿಶಂಕರ್, ಇಇಒ ಎಚ್.ಎಂ. ದ್ಯಾಮಪ್ಪ, ಪಿಡಿಒ ಕುಮಾರ, ಜಿಲ್ಲಾ ಪಂಚಾಯಿತಿ ಸದಸ್ಯೆ ಪದ್ಮಾವತಿ ಬಿ.ಮುನೇಗೌಡ, ಕನ್ಯಾಕುಮಾರಿ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸದಸ್ಯೆ ರೇಣುಕಮ್ಮರಾಜಣ್ಣ, ಹಸನ್ ಘಟ್ಟರವಿ ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !