ಶುಕ್ರವಾರ, ಜನವರಿ 21, 2022
29 °C

ಕಸಬಾ-2 ವ್ಯಾಪ್ತಿಯ ಆರ್‌ಐ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ, ದಾಖಲೆ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಕಸಬಾ-2 ವ್ಯಾಪ್ತಿಯ ರಾಜಸ್ವ ನಿರೀಕ್ಷಕರಾಗಿ(ಆರ್ಐ) ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೀನರಸಿಂಹ ಇವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಡಿವೈಎಸ್ಪಿ ಜಗದೀಶ್ ನೇತೃತ್ವದ 29 ಜನರ ತಂಡ ನಗರದಲ್ಲಿನ ಕುಚ್ಚಪ್ಪನಪೇಟೆಯಲ್ಲಿರುವ ಲಕ್ಷ್ಮೀನರಸಿಂಹ ಅವರ ಮನೆಗೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ.


ಆರ್‌ಐ ಲಕ್ಷ್ಮೀನರಸಿಂಹ

ಲಕ್ಷ್ಮೀನರಸಿಂಹ ಅವರು ಸುಮಾರು 15 ವರ್ಷಗಳಿಂದಲು ನಗರ ಹಾಗೂ ಬಾಶೇಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮ ಲೆಕ್ಕಾಧಿಕಾರಿಯಾಗಿ ಹಾಗೂ ಪ್ರಸ್ತುತ ರಾಜಸ್ವ ನಿರೀಕ್ಷಕರಾಗಿ ಕತ್ಯವ್ಯ ನಿರ್ವಹಿಸುತ್ತಿದ್ದರಾರೆ.

ಎಸಿಬಿ ಅಧಿಕಾರಿಗಳ ತಂಡ ಲಕ್ಷ್ಮೀನರಸಿಂಹ ಅವರ ಮನೆಯಲ್ಲಿನ ಚಿನ್ನ,ಬೆಳ್ಳಿ,ನಗರದು ಹಾಗೂ ಜಮೀನು,ಮನೆಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಲಕ್ಷ್ಮೀನರಸಿಂಹ ಅವರ ಕಚೇರಿ ಸೇರಿದಂತೆ 4 ಕಡೆಗಳಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು