ಬಾಗೇಪಲ್ಲಿ: ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಸ್ತೆ-44 ರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಬುಧವಾರ ಮೃತಪಟ್ಟಿದ್ದಾರೆ.
ಪಟ್ಟಣದಿಂದ ಪರಗೋಡು ಕಡೆಗೆ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ವಾಹನವೊಂದು ಡಿಕ್ಕಿ ಹೊಡೆದು, ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.
ಮೃತ ವ್ಯಕ್ತಿ ಸುಮಾರು 25 ವರ್ಷದ ಯುವಕ ಆಗಿದ್ದು, 5.5.ಅಡಿ ಎತ್ತರ ಇದ್ದು, ಕೈ ಮೇಲೆ ಸ್ಟಾರ್ ಮತ್ತು ಬೊಂಬೆಯ ಟ್ಯಾಟೋ ಕಾಹಿಸಿಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.