ಗುರುವಾರ , ಆಗಸ್ಟ್ 6, 2020
24 °C

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಶುಕ್ರವಾರ ರಾತ್ರಿ ಪಾದಚಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್‌(52) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ನೇಕಾರಿಕೆ ವೃತ್ತಿಯಲ್ಲಿದ್ದ  ಕರೇನಹಳ್ಳಿ ನಿವಾಸಿ ಚಂದ್ರಶೇಖರ್‌ ಮನೆಗೆ ತೆರಳುವಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇನ್ನು ನೋಂದಣಿ ಸಂಖ್ಯೆಯನ್ನು ಸಹ ಹೊಂದಿರದ ದ್ವಿಚಕ್ರವನ್ನು ಅಪಘಾತ ನಡೆದ ಸ್ಥಳದಲ್ಲಿಯೇ ಬಿಟ್ಟು ಸವಾರರು ಪರಾರಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.