ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಜಾಪುರ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಶಾಸಕ ಬಿ.ಶಿವಣ್ಣ

Last Updated 2 ಏಪ್ರಿಲ್ 2021, 6:11 IST
ಅಕ್ಷರ ಗಾತ್ರ

ಆನೇಕಲ್: ಸರ್ಜಾಪುರ ಗ್ರಾಮ ಪಂಚಾಯಿತಿಯ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ವಿಪ್ರೋ ಸಂಸ್ಥೆಯ ಸಿಎಸ್‌ಆರ್‌ ನೆರವು ಕೋರಲಾಗಿದೆ. ಸರ್ಕಾರ ಮತ್ತು ಕಂಪನಿಗಳ ನೆರವಿನಿಂದ ಅತ್ಯಾಧುನಿಕ ಸೌಲಭ್ಯಗಳುಳ್ಳ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಅವರು ತಾಲ್ಲೂಕಿನ ಸರ್ಜಾಪುರದಲ್ಲಿ ಅಂದಾಜು ₹50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಸರ್ಜಾಪುರದ ಸಮಗ್ರ ಅಭಿವೃದ್ಧಿಗಾಗಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ₹5 ಕೋಟಿ ಅನುದಾನ ಮಂಜೂರು ಮಾಡಿಸಲಾಗಿತ್ತು. ಈ ಅನುದಾನದಡಿಯಲ್ಲಿ ರಸ್ತೆ ಅಗಲೀಕರಣ, ಡಾಂಬರೀಕರಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮದ ಪ್ರಮುಖ ರಸ್ತೆಗಳ ಡಾಂಬರೀಕಣ ಮತ್ತು ಸಂಪರ್ಕ ರಸ್ತೆಗಳನ್ನು ಕಾಂಕ್ರಿಟ್‌ ರಸ್ತೆಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಾಲ್ಕು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಳಚರಂಡಿ ತ್ಯಾಜ್ಯ ಸಂಸ್ಕರಣೆಗಾಗಿ ಎಸ್‌ಟಿಪಿ ಘಟಕ ಸ್ಥಾಪನೆ ಮಾಡಲಾಗುತ್ತಿದೆ. ಎಲ್ಲಾ ಅಭಿವೃದ್ಧಿ ಕಾರ್ಯಗಳ ಮೂಲಕ ಸರ್ಜಾಪುರ ಜನತೆಗೆ ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗುತ್ತಿದೆ.ಸರ್ಜಾಪುರ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್‌, ಉಪಾಧ್ಯಕ್ಷ ಸುನೀತಾ, ಮುಖಂಡ ಶಂಭಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT